ಆಡಿಯೋ ಪ್ರಕರಣ, ಆಡಳಿತ ವೈಫಲ್ಯ ಮುಂದಿಟ್ಟು ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಂದ ಸಾಲು ಸಾಲು ಪ್ರತಿಭಟನೆ 

ಆಪರೇಷನ್ ಕಮಲ ಮೂಲಕ ಮೈತ್ರಿ ಸರ್ಕಾರ ಪತನಗೊಳಿಸಿರುವುದನ್ನು ವಿರೋಧಿಸಿ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಲು ಸಾಲು ಪ್ರತಿಭಟನೆಗೆ ಸಜ್ಜಾಗಿದೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಂಗಳೂರು: ಆಪರೇಷನ್ ಕಮಲ ಮೂಲಕ ಮೈತ್ರಿ ಸರ್ಕಾರ ಪತನಗೊಳಿಸಿರುವುದನ್ನು ವಿರೋಧಿಸಿ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಲು ಸಾಲು ಪ್ರತಿಭಟನೆಗೆ ಸಜ್ಜಾಗಿದೆ.

ಸರ್ವಾಧಿಕಾರಿ ಪ್ರಧಾನಿ ನರೇಂದ್ರ ಮೋದಿ ಯಾರ ಮಾತನ್ನು ಕೇಳುತ್ತಿಲ್ಲ. ಪ್ರಜಾಪ್ರಭುತ್ವ ನಾಶ ಪಡಿಸುವ ಮೂಲಕ ದೇಶವನ್ನು ಸರ್ವನಾಶದತ್ತ ಒಯ್ಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ‌

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ವ್ಯವಸ್ಥೆ ಐಸಿಯುನಲ್ಲಿದೆ. ಉದ್ಯೋಗ ಸೃಷ್ಟಿ ಕೋಮಾವಸ್ಥೆಯಲ್ಲಿದೆ. ಉದ್ಯೋಗ ಸೃಷ್ಟಿಯಿರಲಿ ಇರುವ ಉದ್ಯೋಗ ಉಳಿಸಿಕೊಳ್ಳಲು ಆಗುತ್ತಿಲ್ಲ. ದೇಶ ಆರ್ಥಿಕ ತುರ್ತು ಪರಿಸ್ಥಿತಿಯಲ್ಲಿರುವ ಹಾಗೆ ಕಾಣುತ್ತಿದೆ. ಐದೂವರೆ ವರ್ಷದ ಹಿಂದೆ ಮೋದಿ ಪ್ರಧಾನಿ ಆದಾಗ ಜನರಲ್ಲಿ ಸಾಕಷ್ಟು ಆಸೆ ಹುಟ್ಟಿಸಿದ್ದವರು ಇಂದು ಮುಕ್ತ ವ್ಯಾಪಾರ ನೀತಿಗೆ ಸಹಿ ಹಾಕಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು‌.

ನವೆಂಬರ್ ನಾಲ್ಕರಂದು ಮುಂಡಗೋಡ, 5 ಶಿವಮೊಗ್ಗ, 7 ಹಾಸನ, 11 ಬೆಂಗಳೂರು, 12 ವಿಜಯಪುರ, 13 ರಾಯಚೂರು ಹಾಗೂ 14 ಚಿತ್ರದುರ್ಗ ಸೇರಿದಂತೆ ಇನ್ನಿತರ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com