ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಸಿಎಂ ಯಡಿಯೂರಪ್ಪ ಸವಾಲು

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

Published: 04th November 2019 02:03 PM  |   Last Updated: 04th November 2019 02:03 PM   |  A+A-


Yeddyurappa

ಯಡಿಯೂರಪ್ಪ

Posted By : Manjula VN
Source : UNI

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯರೇ ಕಾರಣ. ಧರ್ಮಸ್ಥಳದಶಾಂತಿವನದದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸುವ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ. ಅವರು ಯಾವ ಪಕ್ಷ ಸೇರುತ್ತಾರೆ ಎಂಬುದು ಗೊತ್ತಿಲ್ಲ. ಉಪಚುನಾವಣೆಗೆ ಅವರ ಸ್ಪರ್ಧೆ ಬಗ್ಗೆಯೂ ತಮಗೆ ತಿಳಿದಿಲ್ಲ ಎಂದರು.

ಇತ್ತೀಚೆಗಷ್ಟೇ ಸಿಎಂ ಯಡಿಯೂರಪ್ಪ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಬಿಜೆಪಿ ಕೋರ್ ಕಮಿಟಿ ಸಭೆ ವೇಳೆ ಅನರ್ಹರು ಕೈಜೋಡಿಸದಿದ್ದರೆ ನಾವು ಇನ್ನೂ ಮೂರೂವರೆ ವರ್ಷ ವಿರೋಧ ಪಕ್ಷದಲ್ಲಿ ಕೂರಬೇಕಿತ್ತು ಎಂದು ಮಾತನಾಡಿರುವುಡು ಆಡಿಯೋದಲ್ಲಿ ರೆಕಾರ್ಡ್ ಆಗಿದೆ. 

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp