ಬೇಕಾಬಿಟ್ಟಿ ವರ್ಗಾವಣೆಯೇ ಬಿಜೆಪಿ ಸರ್ಕಾರದ 100 ದಿನಗಳ ಸಾಧನೆ: ರೇವಣ್ಣ ಲೇವಡಿ

ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು.
ಎಚ್.ಡಿ ರೇವಣ್ಣ
ಎಚ್.ಡಿ ರೇವಣ್ಣ

ಬೆಂಗಳೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು. ಇದರಿಂದ ದೇವೇಗೌಡರಿಗೆ ನಷ್ಟವಾಗಿಲ್ಲ. ರಾಜ್ಯದ ಜನತೆಗೆ ನಷ್ಟವಾಯಿತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವ್ಯಾಖ್ಯಾನಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ 14 ತಿಂಗಳ ಕೆಲಸದ ಬಗ್ಗೆ ಕಾಂಗ್ರೆಸ್ ಸ್ಮರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು‌.

ಗೌಡರು ಲೋಕಸಭೆಯಲ್ಲಿ ಸೋತಿದ್ದಾಯಿತು. ಈಗ ಎರಡೂ ಪಕ್ಷಗಳೂ ದೇವೇಗೌಡರು ಈ ರಾಜ್ಯಕ್ಕೆ ಏನೂ ಸಾಧನೆ ಮಾಡಿಲ್ಲ ಎಂದು ಬಿಂಬಿಸಲು ಹೊರಟಿವೆ. ನೂರು ದಿನಗಳ ಸಾಧನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com