ಬಿಎಸ್'ವೈ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು?: ಉರಿಯುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು?  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದರೇ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯಲ್ಲಿ ಉರಿಯುತ್ತಿರುವ ಬೆಂಕಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತುಪ್ಪ ಸುರಿದಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು?  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದರೇ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯಲ್ಲಿ ಉರಿಯುತ್ತಿರುವ ಬೆಂಕಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತುಪ್ಪ ಸುರಿಯುವ ಪ್ರಯತ್ನ ಮಾಡಿದ್ದಾರೆ. 

ಆಡಿಯೋ ರೇಪ್ ಎಂಬ ಬಾಂಬ್ ನಲ್ಲಿ ಯಡಿಯೂರಪ್ಪ ಸಿಲುಕಿಕೊಂಡಿದ್ದಾರೆ. ಸಭೆಯಲ್ಲಿ ಇದ್ದಿದ್ದು ಬಿಜೆಪಿಯವರೇ ವಿನಃ ಅನ್ಯ ಪಕ್ಷದವರಲ್ಲ. ಹೀಗಾಗಿ ಆಡಿಯೋ ರೆಕಾರ್ಡ್ ಮಾಡಿದ್ದು ಬಿಜೆಪಿಯವರೇ ಆಗಿರುತ್ತಾರೆ. ಸಭೆಯಲ್ಲಿ ಯಡಿಯೂರಪ್ಪ ಬಿಟ್ಟರೆ, ಕಟೀಲ್, ಸವದಿ, ಬೊಮ್ಮಾಯಿ ಇದ್ದರು. ಹೀಗಾಗಿ ಈ ಮೂವರಲ್ಲೇ ಯಾರೋ ಒಬ್ಬರು ಆಡಿಯೋ ರೆಕಾರ್ಡ್ ಮಾಡಿರುತ್ತಾರೆಂದು ಸಿದ್ದರಾಮಯ್ಯ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅನುಮಾನದ ಪ್ರಶ್ನೆ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿಯವಂತಾಗಿದೆ. 

ಇದರಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಹೊಸ ಬಾಂಬ್ ಸಿಡಿಸಿದ್ದು, ಆಡಿಯೋ ರೆಕಾರ್ಡ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಎಂದು ಆರೋಪಿಸಿದ್ದಾರೆ. 

ಆಡಿಯೋ ರೆಕಾರ್ಡ್ ಮಾಡಿರುವ ಕಟೀಲ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. 

ಬಿಜೆಪಿಯು ಅನರ್ಹ ಶಾಸಕರ ಬಗ್ಗೆ ಮೃದುಧೋರಣೆ ತೋರುತ್ತಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಡಿಯೋದಲ್ಲಿ ಪ್ರಸ್ತಾಪಿಸಿದ್ದರು. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚಿತ್ರೀಕರಿಸಿದ ಈ ವಿಡಿಯೋವನ್ನು ಕಟೀಲ್ ಬಹಿರಂಗಗೊಳಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಗರಂ ಆದ ಬಳಿಕ ಇದೀಗ ಯಡಿಯೂರಪ್ಪ ಕೂಡ ಉಲ್ಟಾ ಹೊಡೆಯುತ್ತಿದ್ದಾರೆಂದು ಲೇವಡಿ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com