ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ- ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧವಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಲಕ್ಷ್ಮಣ್ ಸವದಿ
ಲಕ್ಷ್ಮಣ್ ಸವದಿ

ಬೆಂಗಳೂರು: ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧವಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಲಕ್ಷ್ಮಣ್ ಸವದಿ, ಇನ್ಮುಂದೆ ಪ್ರತಿ ದಿನ ಓರ್ವ ಸಚಿವರು ಬಿಜೆಪಿ ಕಚೇರಿಯಲ್ಲಿ ಹಾಜರಿದ್ದು.ಕಾರ್ಯಕರ್ತರ ಕುಂದು ಕೊರತೆ ಆಲಿಸಲಿದ್ದಾರೆ. ಸಚಿವರ ಮನೆ,ವಿಧಾನ ಸೌಧಕ್ಕೆ ಕಾರ್ಯಕರ್ತರ ಅಲೆದಾಟ ತಪ್ಪಿಸಲು ಪಕ್ಷದ ವರಿಷ್ಠರು ಇಂತಹ ತೀರ್ಮಾನ ಕೈಗೊಂಡಿದ್ದಾರೆ ಎಂದರು. 

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಯಲ್ಲಿ ಪ್ರತಿ ದಿನ ಒಬ್ಬೊಬ್ಬ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಬೇಕೆಂಬ ನಿಯಮ ಅಳವಡಿಸಿಕೊಂಡಿದ್ದರು.ಇದೀಗ ಮುಖ್ಯಮಂತ್ರಿ ಬಿ.ಎಸ್.ಯ ಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳವಡಿಸಿಕೊಂಡಿದೆ ಎಂದು ಹೇಳಿದರು. 

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗು ಪಕ್ಷದ ಇತರು ಮುಖಂಡರು ಚರ್ಚಿಸಿ ಪ್ರತಿ ದಿನ ಸಚಿವರೊಬ್ಬರು ಪಕ್ಷದ ಕಚೇರಿಗೆ ಬರಬೇಕು ಎನ್ನುವ ನಿಯಮವನ್ನು ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com