ಉಪ ಚುನಾವಣೆ: ಸಿದ್ದು ಭೇಟಿ ಮಾಡಿದ ಬಿಜೆಪಿ ಮುಖಂಡ ರಾಜು ಕಾಗೆ 

ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು  ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 
ಸಿದ್ದರಾಮಯ್ಯ, ರಾಜು ಕಾಗೆ
ಸಿದ್ದರಾಮಯ್ಯ, ರಾಜು ಕಾಗೆ

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು  ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ, ಅನರ್ಹರಿಗೆ ಪಾಠ ಕಲಿಸಿ  ಕ್ಷೇತ್ರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ರಣತಂತ್ರ ರೂಪಿಸುತ್ತಿವೆ. ಸಮ್ಮಿಶ್ರ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೆಳಗಾವಿ ಜಿಲ್ಲಾ ರಾಜಕೀಯದತ್ತ ಕಾಂಗ್ರೆಸ್ ನಾಯಕರು ಚಿತ್ತ ಹರಿಸಿದ್ದಾರೆ.

ನಿನ್ನೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಇಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ನಾಲ್ಕು ಬಾರಿ ಬಿಜೆಪಿಯ ಶಾಸಕರಾಗಿದ್ದ ರಾಜು ಕಾಗೆ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ  ಶ್ರೀಮಂತ ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. ಇದೀಗ ಅನರ್ಹ ಶಾಸಕರಾಗಿರುವ ಶ್ರೀಮಂತ ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗುವ  ಸಾಧ್ಯತೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ರಾಜು ಕಾಗೆ ಕಾಗವಾಡದಿಂದ ಕಾಂಗ್ರೆಸ್ ಟಿಕೆಟ್'ಗಾಗಿ ಪ್ರಯತ್ನಿಸುತ್ತಿದ್ದಾರೆ. 

ಒಂದು ವೇಳೆ ಶ್ರೀಮಂತ ಪಾಟೀಲ್ ಅನರ್ಹರಾಗದಿದ್ದರೆ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಬಗ್ಗೆಯೂ ರಾಜು ಕಾಗೆ ಆಸಕ್ತಿ ಹೊಂದಿದ್ದಾರೆ. ಹೀಗಾಗಿಯೇ ಶಿವಕುಮಾರ್  ಹಾಗೂ ಸಿದ್ದರಾಮಯ್ಯ ಅವರನ್ನು  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com