ಡಿಕೆಶಿ ಸಂಪರ್ಕಿಸಿದ ರಾಜು ಕಾಗೆ, ಅಶೋಕ ಪೂಜಾರಿ: ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ?

ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹಾಗೂ ಗೋಕಾಕ್ ಕ್ಷೇತ್ರದ ಬಿಜೆಪಿ ಮುಖಂಡ ಅಶೋಕ್ ಪೂಜಾರಿಯವರು ಭಾನುವಾರ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದು, ಮಹತ್ವದ ಮಾರುಕತೆ ನಡೆಸಿರುವುದು ತೀವ್ರ ಕುತೂಹಲವನ್ನು ಕೆರಳಿಸಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹಾಗೂ ಗೋಕಾಕ್ ಕ್ಷೇತ್ರದ ಬಿಜೆಪಿ ಮುಖಂಡ ಅಶೋಕ್ ಪೂಜಾರಿಯವರು ಭಾನುವಾರ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದು, ಮಹತ್ವದ ಮಾರುಕತೆ ನಡೆಸಿರುವುದು ತೀವ್ರ ಕುತೂಹಲವನ್ನು ಕೆರಳಿಸಿದೆ. 

ನಾಲ್ಕು ಬಾರಿ ಬಿಜೆಪಿಯ ಶಾಸಕರಾಗಿದ್ದ ರಾಜು ಕಾಗೆ 2018ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀಮಂತ ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. ಇದೀಗ ಅನರ್ಹ ಶಾಸಕರಾಗಿರುವ ಶ್ರೀಮಂತ ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗುವ ಲಕ್ಷಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ರಾಜು ಕಾಗೆ ಕಾಗವಾಡದಿಂದ ಕಾಂಗ್ರೆಸ್ ಟಿಕೆಟ್'ಗಾಗಿ ಪ್ರಯತ್ನಿಸುತ್ತಿದ್ದಾರೆ. 

ಒಂದು ವೇಳೆ ಶ್ರೀಮಂತ ಪಾಟೀಲ್ ಅನರ್ಹರಾಗದಿದ್ದರೆ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಬಗ್ಗೆಯೂ ರಾಜು ಕಾಗೆ ಆಸಕ್ತಿ ಹೊಂದಿದ್ದಾರೆ. ಹೀಗಾಗಿಯೇ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜು ಕಾಗೆಯವರು, ಬಿಜೆಪಿ ಟಿಕೆಟ್ ನೀಡಲಿ ಅಥವಾ ನೀಡದೇ ಹೋಗಲಿ, ಕಾಗವಾಡದಿಂದ ಈ ಬಾರಿ ಚುನಾವಣೆಗೆ ನಿಲ್ಲಿವುದಂತೂ ಖಚಿತ ಎಂದು ಹೇಳಿದ್ದಾರೆ. ಇನ್ನೂ ಮೂರು ವರ್ಷಗಳ ಕಾಲ ನಾನು ಮನೆಯಲ್ಲಿಯೇ ಕೂರಬೇಕೆಂದು ಬಿಜೆಪಿ ಬಯಸಿದೆ. ಅದು ಸಾಧ್ಯವಿಲ್ಲ. ನಾನು ನನ್ನದೇ ದಾರಿಯನ್ನು ಕಂಡುಕೊಂಡಿದ್ದೇನೆ. ನನ್ನ ರಾಜಕೀಯ ಭವಿಷ್ಯಕ್ಕೆ ಆಕಾರವನ್ನು ನೀಡುತ್ತೇನೆ. ಅರ್ಹವಿರುವ ಟಿಕೆಟ್'ನ್ನು ನನಗೆ ನೀಡಲು ಬಿಜೆಪಿ ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದನ್ನು ರಾಜೂ ಕಾಗೆ ಒಪ್ಪಿಕೊಂಡಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕ ಸೇರ್ಪಡೆಗೊಳ್ಳುತ್ತೇನೆಂದು ಹೇಳಿದ್ದಾರೆ. 

ಇದರಂತೆ ಅಶೋಕ ಪೂಜಾರಿಯವರು ಮಾತನಾಡಿ, ಭವಿಷ್ಯದ ಯೋಜನೆಗಳಿಗಾಗಿ ಸುಪ್ರೀಂಕೋರ್ಟ್ ತೀರ್ಪಿನವರೆಗೂ ಕಾಯುತ್ತೇನೆ. ಗೋಕಾಕ್ ನಲ್ಲಿರುವ ನನ್ನ ಬೆಂಬಲಿಗರೊಂದಿಗೆ ಸಭೆ ನಡೆಸುತ್ತೇನೆ. ಬಳಿಕವಷ್ಟೇ ನಿರ್ಧಾರ ತೆಗೆದುಕೊಳ್ಳುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com