ಮುಖ್ಯಮಂತ್ರಿ ಪದವಿ ಕೊಟ್ಟರೂ ಮತ್ತೆ ಬಿಜೆಪಿಗೆ ಹೋಗುವುದಿಲ್ಲ: ರಾಜು ಕಾಗೆ ಸ್ಪಷ್ಟನೆ

ಮಾನಸಿಕವಾಗಿ ನಾನು ಬಿಜೆಪಿಯಿಂದ ದೂರ ಸರಿದಿದ್ದೇ ನೆ. ನಾಳೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನ.13ರಂದು ಕಾಂಗ್ರೆಸ್​ ಪಕ್ಷ ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.
ರಾಜು ಕಾಗೆ
ರಾಜು ಕಾಗೆ

ಬೆಂಗಳೂರು: ಮಾನಸಿಕವಾಗಿ ನಾನು ಬಿಜೆಪಿಯಿಂದ ದೂರ ಸರಿದಿದ್ದೇ ನೆ. ನಾಳೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನ.13ರಂದು ಕಾಂಗ್ರೆಸ್​ ಪಕ್ಷ ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಳೆದೆರಡು ದಿನಗಳಲ್ಲಿ ಕಾಂಗ್ರೆಸ್ ​ ನಾಯಕರಾದ ಮಾಜಿ ಸಚಿವ ಡಿಕೆ ಶಿವಕುಮಾರ್​ ,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ್ದೇನೆ. ಕಾಂಗ್ರೆಸ್​ ನಾಯಕರು ತಮಗೆ ಟಿಕೆಟ್​ ನೀಡುವ ಭರವಸೆ ನೀಡಿದ್ದು, ಕಾಂಗ್ರೆಸ್​ ಪಕ್ಷ ಸೇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕೊಡುತ್ತೇನೆ, ಸುಮ್ಮನಿರು ಎಂದರು. ಯಡಿಯೂರಪ್ಪ ಮಾತು ಕೇಳಿ ಸುಮ್ಮನಾದೆ. ಆದರೆ, ಈಗ ಶ್ರೀಮಂತ ಪಾಟೀಲ್ ಗೆಲ್ಲಿಸಿಕೊಂಡು ಬನ್ನಿ ಎನ್ನುತ್ತಿದ್ದಾರೆ. ಈ ಹಿಂದೆ ಅವರ ವಿರುದ್ಧ ಪ್ರಚಾರ ಮಾಡಿ ಈಗ ಅವರ ಗೆಲುವಿಗೆ ಹೋರಾಡುವುದು ಸರಿಯಲ್ಲ ಮತ್ತು ಅದು ಆಗುವುದಿಲ್ಲ ಎಂದೆ. ಇದೇ ಹಿನ್ನೆಲೆಯಲ್ಲಿ ಈಗ ಪಕ್ಷ ಬಿಡುವ ನಿರ್ಧಾರ ಕೈಗೊಂಡಿದ್ದು. ಈಗ ಎಲ್ಲವೂ ಮುಗಿದ ಅಧ್ಯಾಯ ಎಂದರು.

ಕಾಂಗ್ರೆಸ್​ ನಾಯಕರನ್ನು ಭೇಟಿಯಾಗಿದ್ದು, ಪಕ್ಷದಿಂದ ಟಿಕೆಟ್​ ನೀಡುವ ಭರವಸೆ ಸಿಕ್ಕಿದೆ. ಈಗ ಬಿಜೆಪಿಯವರು ಎಷ್ಟೇ ಮನವೊಲಿಸುದರೂ ಪ್ರಯೋಜನವಿಲ್ಲ. ಎಲ್ಲವೂ ನಿರ್ಧಾರವಾಗಿದೆ. ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಸಿಎಂ ಪದವಿ ಕೊಟ್ಟರು ನಾನು ಮರಳಿ ಬಜೆಪಿಗೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಕಾಗವಾಡ ಕ್ಷೇತ್ರದಲ್ಲಿ ಅನರ್ಹ ಶಾಸಕ ಶ್ರೀಮಂತಗೌಡ ಪಾಟೀಲ್​ ಅವರಿಗೆ ಟಿಕೆಟ್​ ನೀಡಲು ಮುಂದಾಗಿರುವ ಹಿನ್ನೆಲೆ ಕ್ಷಿಪ್ರ ರಾಜಕೀಯಕ್ಕೆ ಮುಂದಾದ ರಾಜು ಕಾಗೆ ಈ ನಿರ್ಧಾರ ಪ್ರಕಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com