ಉಪಚುನಾವಣಾ ಸಮರ: ಮೂರು ಪಕ್ಷಗಳ ರಾಜಕೀಯದಾಟ ಆರಂಭ

ಉಪಚುನಾವಣಾ ಸಮರ ಆರಂಭಗೊಂಡಿದ್ದು, ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಸೋಮವಾರದಿಂದ ಆರಂಭವಾಗಲಿದೆ. ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಇಡೀ ಜಿಲ್ಲೆಗೆ ಹಾಗೂ 9 ಕ್ಷೇತ್ರಗಳಲ್ಲಿ ಆಯಾ ಕ್ಷೇತ್ರಗಳಿಗಷ್ಟೇ ನೀತಿ ಸಂಹಿತೆ ಅನ್ವಯವಾಗಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉಪಚುನಾವಣಾ ಸಮರ ಆರಂಭಗೊಂಡಿದ್ದು, ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಸೋಮವಾರದಿಂದ ಆರಂಭವಾಗಲಿದೆ. ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಇಡೀ ಜಿಲ್ಲೆಗೆ ಹಾಗೂ 9 ಕ್ಷೇತ್ರಗಳಲ್ಲಿ ಆಯಾ ಕ್ಷೇತ್ರಗಳಿಗಷ್ಟೇ ನೀತಿ ಸಂಹಿತೆ ಅನ್ವಯವಾಗಲಿದೆ. 

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಚುನಾವಣಾ ಆಯೋಗವು ಸಕಲ ಸಿದ್ಧಕೆ ಮಾಡಿಕೊಂಡಿದೆ. ಈ ಹಿಂದೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ ಎಂದು ಅಧಇಕಾರಿಗಳು ತಿಳಿಸಿದ್ದಾರೆ. 

ಈ ನಡುವೆ ಅನರ್ಹ ಶಾಸಕರ ಅರ್ಜಿ ಕುರಿತಂತೆ ಬುಧವಾರ ಸುಪ್ರೀಂಕೋರ್ಟ್ ತೀರ್ಪು ನೀಡಲಿದ್ದು, ತೀರ್ಪಿನ ಬಳಿಕ ಉಪಚುನಾವಣಾ ಸಮರ ಮತ್ತಷ್ಟು ಚುರುಕುಗೊಳ್ಳಲಿದೆ. ಸುಪ್ರೀಂಕೋರ್ಟ್ ಆದೇಶದಿಂದ ಅನರ್ಹ ಶಾಸಕರಿಗೆ ನಿರಾಳ ದೊರಕಿದ್ದೇ ಆದರೆ, ಎಲ್ಲಾ 15 ಕ್ಷೇತ್ರಗಳಿಗೂ ಅನರ್ಹ ಶಾಸಕರನ್ನೇ ನಿಲ್ಲಿಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. 

ಪಕ್ಷದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವುದಕ್ಕೂ ಮುನ್ನ ಸುಪ್ರೀಂಕೋರ್ ಆದೇಶದವರೆಗೂ ಬಿಜೆಪಿ ಕಾಯಲಿದ್ದು, ತೀರ್ಪಿನ ಬಳಿಕವಷ್ಟೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ. 
 
ಇನ್ನು ಅನರ್ಹ ಶಾಸಕರೂ ಕೂಡ ಸುಪ್ರೀಂಕೋರ್ಟ್ ನಿಂದ ನ್ಯಾಯ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷ ನಾಯಕರು ಭಾನುವಾರ ಬೆಂಗಳೂರಿನಲ್ಲಿ ಒಂದರ ಹಿಂದೆ ಒಂದರಂತೆ ಸಭೆಗಳನ್ನು ನಡೆಸಿ, ಉಪಚುನಾವಣೆಗೆ ಭಾರೀ ತಂತ್ರಗಳನ್ನು ರೂಪಿಸಿದೆ. ಈ ಬಾರಿಗ ಉಪ ಚುನಾವಣೆ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಟೆಯ ಪ್ರಶ್ನೆಯಾಗಿದೆ. ವಿಧಾನಸಭೆ ಸದಸ್ಯರ 224ರ ಪೈಕಿ ಬಿಜೆಪಿ 105 ಬಲವನ್ನು ಹೊಂದಿದೆ. ಇನ್ನುಳಿದ 13 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. 
 
ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು, ರಾಜ್ಯದ 15 ವಿಧಾನಸಭಾ ಕ್ಷೇತ್ರಘಳ ಉಪ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನ.18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.19ರಂದು ಪತ್ರಗಳ ಪರಿಶೀಲನೆ, ನ.21ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಡಿ.9 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com