ಉಪಚುನಾವಣೆ ಸಮರ: ಬಂಡಾಯ ಶಾಸಕರ ಮನವೊಲಿಸಲು ಬಿಜೆಪಿ ಯತ್ನ

ಉಪಚುನಾವಣೆ ಕದನ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ಕಸರತ್ತುಗಳು ಚುರುಕುಗೊಂಡಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದರೆ, ಇತ್ತ ಬಿಜೆಪಿ, ಚುನಾವಣೆಗೆ ಸಿದ್ಧಗೊಳ್ಳಬೇಕೋ ಅಥವಾ ಬಂಡಾಯ ಶಾಸಕರ ಮನವೊಲಿಸಬೇಕೋ ಎಂಬ ಗೊಂದಲದಲ್ಲಿ ಸಿಲುಕಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉಪಚುನಾವಣೆ ಕದನ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ಕಸರತ್ತುಗಳು ಚುರುಕುಗೊಂಡಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದರೆ, ಇತ್ತ ಬಿಜೆಪಿ, ಚುನಾವಣೆಗೆ ಸಿದ್ಧಗೊಳ್ಳಬೇಕೋ ಅಥವಾ ಬಂಡಾಯ ಶಾಸಕರ ಮನವೊಲಿಸಬೇಕೋ ಎಂಬ ಗೊಂದಲದಲ್ಲಿ ಸಿಲುಕಿಕೊಂಡಿದೆ. 

15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಕಾಂಗ್ರೆಸ್ ಈಗಾಗಲೆ 8 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಜೆಡಿಎಸ್ ಪಕ್ಷ ಅನರ್ಹ ಶಾಸಕರ ಕುರಿತ ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾದು ಕುಳಿತಿದೆ. 

ಉಪಚುನಾವಣೆ ವೇಳೆ ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಯಡಿಯೂರಪ್ಪ ಅವರು ಚಿಂತಿಸಿದ್ದು, ಇದು ಬಿಜೆಪಿ ಪಾಳಯದಲ್ಲಿರುವ ಕೆಲ ನಾಯಕರಿಗೆ ಇರಿಸುಮುನಿಸು ಉಂಟು ಮಾಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಬಂಡಾಯ ಶಾಸಕರನ್ನು ಬಿಜೆಪಿ ತೆಗೆದುಕೊಳ್ಳುವುದು ನಮಗಿಷ್ಟವಿಲ್ಲ. ಸರ್ಕಾರ ರಚಿಸಲು ಇದು ಸಹಾಯಕವಾಗಬಹುದು. ಆದರೆ, ನಮ್ಮ ಪಕ್ಷಕ್ಕೆ ನಮ್ಮದೇ ಸಿದ್ಧಾಂತವಿದೆ. ಹೊರಗಿನಿಂದ ಬಂದವರು ಹೊಂದಿಕೊಳ್ಳುವುದಿಲ್ಲ. ಒಂದು ವೇಳೆ ಅವರನ್ನು ನಾವು ಸೇರ್ಪಡೆಗೊಳಿಸಿಕೊಂಡರೂ ಅದು ಪಕ್ಷದ ಕಾರ್ಯಕರ್ತರಿಗೆ ಇಷ್ಟವಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಶಾಸಕರ ಮನವೊಲಿಸಲು ನಿಗಮ ಮಂಡಳಿ ಹುದ್ದೆಯ ಆಫರ್'ನ್ನು ಯಡಿಯೂರಪ್ಪ ಅವರು ನೀಡಿದ್ದು, ಈ ಮೂಲಕ ಮನವೊಲಿಸಲು ಯತ್ನಿಸಿದ್ದಾರೆ. ರಾಜು ಕಾಗೆ, ಅಶೋಕ್ ಪೂಜಾರಿ ಹಾಗೂ ಶರತ್ ಬಚ್ಚೇಗೌಡ ಅವರಿಗೆ ಹುದ್ದೆ ನೀಡಿದ್ದರು. ಆದರೆ, ಮೂರು ಹುದ್ದೆಗಳನ್ನು ಮೂವರೂ ನಾಯಕರು ನಿರಾಕರಿಸಿದ್ದಾರೆ. 

ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಉಮೇಶ್ ಕತ್ತಿಯವರು ಪೂಜಾರಿಯವರ ಮನವೊಲಿಸಲು ಯತ್ನ ನಡೆಸುತ್ತಿದ್ದು, ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್  ಅವರಿಗೆ ಶರತ್ ಬಚ್ಚೇಗೌಡ ಅವರ ಮನವೊಲಿಸುವ ಜವಾಬ್ದಾರಿಯನ್ನು ನೀಡಲಾಗಿದೆ. 

17 ಶಾಸಕರು ರಾಜೀನಾಮೆ ನೀಡಿದ್ದರಿಂತಲೇ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಶರತ್ ಅವರಿಕೆ ಟಿಕೆಟ್ ನೀಡುವುದಿಲ್ಲ ಎಂದು ಹೇಳುತ್ತಿಲ್ಲ. ಪೂಜಾರಿ ಹಾಗೂ ಕಾಗೆಯವರಿಗೆ ಅವಕಾಶ ನೀಡಬೇಕಿದೆ. 2018ರಲ್ಲಿ ಗೆಲುವು ಸಾಧಿಸಿದ್ದರೆ, ಇಂದು ನಾವು ಇಂತಹ ಪರಿಸ್ಥಿತಿಯನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಟಿ.ರವಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com