ಉಪಚುನಾವಣೆಯಲ್ಲಿ ಕನಿಷ್ಠ 12ರಿಂದ 15 ಸ್ಥಾನ ಗೆಲ್ಲುತ್ತೇವೆ: ಸಿದ್ದರಾಮಯ್ಯ 

ಮುಂಬರುವ ಉಪ ಚುನಾವೆಯಲ್ಲಿ ಕಾಂಗ್ರೆಸ್ ಪಕ್ಷ ಸುಮಾರು 12 ರಿಂದ 15 ಸೀಟುಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಉಪ ಚುನಾವೆಯಲ್ಲಿ ಕಾಂಗ್ರೆಸ್ ಪಕ್ಷ ಸುಮಾರು 12 ರಿಂದ 15 ಸೀಟುಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯಪುರದಜಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ 15 ಸ್ಥಾನ ಗೆಲ್ಲುತ್ತದೆ ಎಂದು ನಾನು ಹೇಳಿಲ್ಲ, 12 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. 15ಸ್ಠಾನ ಗೆದ್ದರೇ ಆಶ್ಚರ್ಯವಿಲ್ಲ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

ಆದರೆ, ದೇವೇಗೌಡರು ಏಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಬಿಜೆಪಿ ಜತೆ ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿರುವ ಶಂಕೆ ಇದೆ ಎಂದರು. ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಬಾಕಿ ಉಳಿದಿರುವ 7 ಕ್ಷೇತ್ರಗಳಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ಯಾವುದೇ ಮುಖಂಡರೊಂದಿಗೆ ಮನಸ್ತಾಪ ಉಂಟಾಗಿಲ್ಲ. ಮಾಧ್ಯಮಗಳಲ್ಲಿ ಬಂದ ಸುದ್ದಿ ಶುದ್ಧ ಸುಳ್ಳು. ನಾವು “ಆಪರೇಷನ್‌ ಹಸ್ತ’ ಮಾಡಲ್ಲ. ಸಚಿವ ಸಿ.ಟಿ.ರವಿಯವರು ಮೊದಲು ಬಿಜೆಪಿ ಬಿಟ್ಟು ಬರುವವರನ್ನು ತಡೆಯಲಿ. ಬಿಜೆಪಿ ಬಳಿ ದುಡ್ಡಿದೆ, ಹೀಗಾಗಿ, ಅನೈತಿಕ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com