16 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ: ರೋಷನ್ ಬೇಗ್ ಪಕ್ಷ ಸೇರ್ಪಡೆಗೆ ಬ್ರೇಕ್ 

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. 
ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ ಕಾರ್ಯಕ್ರಮ
ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ ಕಾರ್ಯಕ್ರಮ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. 


ಬಿಜೆಪಿ ಕಚೇರಿ ಮುಂದೆ ನಡೆದ ಸರಳ ಸಮಾರಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್, ರಾಜ್ಯ ಉಸ್ತುವಾರಿ ಮುರಳೀಧರ ರಾವ್​ ಸಮ್ಮುಖದಲ್ಲಿ 16 ಅನರ್ಹ ಶಾಸಕರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾದರಯ. ಅವರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಮೊದಲು ಬಿಜೆಪಿ ಕಚೇರಿಗೆ ಆಗಮಿಸಿದ ಅನರ್ಹ ಶಾಸಕರು ಪಕ್ಷದ ರಾಜ್ಯಾಧ್ಯಕ್ಷರ ಕಚೇರಿಗೆ ತೆರಳಿ ಪಕ್ಷದ ಪ್ರಾಥಮಿಕ ಸದಸ್ಯತ್ವ ವನ್ನು ಪಡೆದರು.ಶಿವಾಜಿ ನಗರದ ಅನರ್ಹ ಶಾಸಕ ರೋಷ ನ್ ಬೇಗ್ ಬಿಜೆಪಿ ಸೇರ್ಪಡೆಗೆ ಬ್ರೇಕ್ ಬಿದ್ದಿದೆ.


ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.ನಿನ್ನೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿಹಿಡಿದು ಮುಂದಿನ ತಿಂಗಳು 5ರಂದು ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂದು ತೀರ್ಪು ನೀಡಿದೆ. ಇದರಿಂದ ಅನರ್ಹ ಶಾಸಕರ ರಾಜಕೀಯ ಬದುಕಿಗೆ ಸದ್ಯಕ್ಕೆ ಮರುಚೈತನ್ಯ ಸಿಕ್ಕಂತಾಗಿದೆ.  


ಭಾರತೀಯ ಜನತಾ ಪಾರ್ಟಿಯ ಬೆಂಬಲದಿಂದಲೇ ಈ ಶಾಸಕರು ರಾಜೀನಾಮೆ ನೀಡಿದ್ದರು. ನಂತರ ಬಿಜೆಪಿಗೆ ಸೇರುತ್ತಾರೆ ಎಂಬ ಮಾತುಗಳೇ ದಟ್ಟವಾಗಿ ಕೇಳಿಬರುತ್ತಿತ್ತು. ಇದೀಗ ಉಪ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹೆಚ್ಚಾಗಿ ಓಡಾಡುತ್ತಿದ್ದು, ಅಲ್ಲಿಗೆ ಹೆಚ್ಚಿನ ಅನುದಾನ, ಯೋಜನೆ, ನೆರವು ಪ್ರಕಟಿಸುತ್ತಿದ್ದಾರೆ. ಚುನಾವಣೆಯಲ್ಲಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕೂಡ ಬಿಜೆಪಿ ಹೊಂದಿದೆ.

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನ ಅನರ್ಹ ಶಾಸಕರು: ಪ್ರತಾಪ್ ಗೌಡ ಪಾಟೀಲ್(ಮಸ್ಕಿ), ಬಿ ಸಿ ಪಾಟೀಲ್(ಹೀರೇಕೆರೂರು), ಶಿವರಾಮ್ ಹೆಬ್ಬಾರ್(ಯಲ್ಲಾಪುರ), ಎಸ್ ಟಿ ಸೋಮಶೇಖರ್(ಯಶವಂತಪುರ), ಭೈರತಿ ಬಸವರಾಜ್(ಕೆ ಆರ್ ಪುರಂ), ಆನಂದ್ ಸಿಂಗ್(ವಿಜಯನಗರ), ಎನ್ ಮುನಿರತ್ನ(ಆರ್ ಆರ್ ನಗರ), ಕೆ ಸುಧಾಕರ್(ಚಿಕ್ಕಬಳ್ಳಾಪುರ), ಎಂಟಿಬಿ ನಾಗರಾಜ್(ಹೊಸಕೋಟೆ), ಶ್ರೀಮಂತ ಪಾಟೀಲ್(ಕಾಗವಾಡ), ರಮೇಶ್ ಜಾರಕಿಹೊಳಿ(ಗೋಕಾಕ್), ಮಹೇಶ್ ಕುಮಟಳ್ಳಿ(ಅಥಣಿ), ಆರ್ ಶಂಕರ್(ರಾಣಿಬೆನ್ನೂರು).


ಬಿಜೆಪಿ ಸೇರ್ಪಡೆಗೊಂಡ ಜೆಡಿಎಸ್ ಸದಸ್ಯರು: ಕೆ ಗೋಪಾಲಯ್ಯ(ಮಹಾಲಕ್ಷ್ಮಿ ಲೇ ಔಟ್), ಎ ಎಚ್ ವಿಶ್ವನಾಥ್(ಹುಣಸೂರು), ಕೆ ಸಿ ನಾರಾಯಣ ಗೌಡ(ಕೆ ಆರ್ ಪೇಟೆ). 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com