ರೋಷನ್ ಬೇಗ್‍ ಕೈ ತಪ್ಪಿದ ಬಿಜೆಪಿ ಟಿಕೆಟ್, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಉಪ ಚುನಾವಣೆಯಲ್ಲಿ ಬಿಜೆಪಿ ತಮಗೇ ಟಿಕೆಟ್ ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕ ರೋಷನ್ ಬೇಗ್ ಅವರಿಗೆ ಕೇಸರಿ ಪಕ್ಷ ಬಿಗ್ ಶಾಕ್ ನೀಡಿದ್ದು, ಶಿವಾಜಿ ನಗರ ಕ್ಷೇತ್ರದ ಟಿಕೆಟ್ ಅನ್ನು ಬಿಬಿಎಂಪಿ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ.
ರೋಷನ್ ಬೇಗ್
ರೋಷನ್ ಬೇಗ್

ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ತಮಗೇ ಟಿಕೆಟ್ ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕ ರೋಷನ್ ಬೇಗ್ ಅವರಿಗೆ ಕೇಸರಿ ಪಕ್ಷ ಬಿಗ್ ಶಾಕ್ ನೀಡಿದ್ದು, ಶಿವಾಜಿ ನಗರ ಕ್ಷೇತ್ರದ ಟಿಕೆಟ್ ಅನ್ನು ಬಿಬಿಎಂಪಿ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮತ್ತು ಟಿಕೆಟ್ ನೀಡಲು ಆರ್ ಎಸ್ ಎಸ್ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೋಷನ್ ಬೇಗ್ ಅವರನ್ನು ಇಂದು ಬಿಜೆಪಿಗೆ ಸೇರಿಸಿಕೊಂಡಿಲ್ಲ ಮತ್ತು ಪಕ್ಷದ ಟಿಕೆಟ್ ಅನ್ನು ನಿರಾಕರಿಸಲಾಗಿದೆ. 

ಇಂದು ಬೆಳಗ್ಗೆ ಬಿಜೆಪಿ ಬಿಡುಗಡೆ ಮಾಡಿದ 13 ಕ್ಷೇತ್ರಗಳ ಪಟ್ಟಿಯಲ್ಲಿ ಶಿವಾಜಿನಗರದ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಆದರೆ ನಂತರ ಬಿಡುಗಡೆಯಾದ ಎರಡನೇ ಪಟ್ಟಿಯಲ್ಲಿ ಶರವಣ ಅವರ ಹೆಸರನ್ನು ಘೋಷಿಸಿದೆ. ಶರವಣ ಅವರು ಹಲಸೂರು ವಾರ್ಡ್ ಪಾಲಿಕೆ ಸದಸ್ಯೆ ಮಮತಾ ಅವರ ಪತಿಯಾಗಿದ್ದಾರೆ.

ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಸಮಾಧಾನಗೊಂಡ ರೋಷನ್ ಬೇಗ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇದರೊಂದಿಗೆ ಬಿಜೆಪಿಗೆ ಎರಡನೇ ಬಂಡಾಯ ಎದುರಾಗಿದೆ. ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ತುಮಕೂರಿನಲ್ಲಿ ರೋಷನ್ ಬೇಗ್ ಬಿಜೆಪಿ ಸೇರ್ಪಡೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪ ಅವರು, ಇನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಮಾಡಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com