ಪಕ್ಷೇತರ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಇಂದು ನಾಮಪತ್ರ ಸಲ್ಲಿಕೆ!

ಅನರ್ಹ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪ ನೀಡಿದ ಬೆನ್ನಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. 
ಶರತ್ ಬಚ್ಚೇಗೌಡ
ಶರತ್ ಬಚ್ಚೇಗೌಡ

ಹೊಸಕೋಟೆ: ಅನರ್ಹ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪ ನೀಡಿದ ಬೆನ್ನಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ.

ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಹೀಗಾಗಿ ಹೋಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ನೀಡಲಿದೆ. 

ಪಕ್ಷ ಬಿಟ್ಟು ಬಂದವರಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂದು ಈ ಹಿಂದೆಯೇ ಬಹಿರಂಗವಾಗಿ  ಅಸಮಾಧಾನ ಹೊರಹಾಕಿದ್ದ ಶರತ್ ಬಚ್ಚೇಗೌಡ ಪಕ್ಷ ತೊರೆಯುವ ಸೂಚನೆಯನ್ನು ನೀಡಿದ್ದರು. ಅದರಂತೆ  ಬಂಡಾಯ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

ನಾನು 2018ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಕಡಿಮೆ ಮತಗಳ ಅಂತರದಿಂದ ಸೋತಿದ್ದೆ, ಹೀಗಾಗಿ ಈ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇರುವುದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ  ಶರತ್ ಬಚ್ಚೆಗೌಡ ಹೇಳಿದ್ದಾರೆ. ನಾನು ಹಲವು ವರ್ಷಗಳಿಂದ ಬಿಜೆಪಿಗಾಗಿ ಕೆಲಸ ಮಾಡಿದ್ದೇನೆ, ನಾನು ಯಾವುದೇ ಪಕ್ಷ ವಿರೋದಧಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿರುವುದರಲ್ಲಿ ನನ್ನ ತಂದೆಯವರ ಪಾತ್ರವಿಲ್ಲ, ನಾನು ಸ್ವತಂತ್ರ್ಯವಾಗಿ ನಿರ್ಧಾರ ಕೈಗೊಂಡಿದ್ದೇನೆ, ಕ್ಷೇತ್ರದ ಜನತೆ ನನ್ನ ಬೆಂಬಲಕ್ಕಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com