ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ 

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು 19 ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಶುರುವಾಗಿದೆ. 

ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟ ಪ್ರಕಟಿಸಿದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಸುಪ್ರೀಂ ಕೋರ್ಟ್​ ತೀರ್ಪಿಗಾಗಿ ಕಾದು ಕುಳಿತಿದ್ದ ಜೆಡಿಎಸ್​, ತೀರ್ಪಿನ ಬಳಿಕ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಹೊಸಕೋಟೆಯಲ್ಲಿ ಶರತ್​ ಬಚ್ಚೇಗೌಡಗೆ ಬೆಂಬಲಿಸಲಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ನಾಳೆ ಘೋಷಿಸುವುದಾಗಿ ತಿಳಿಸಿದೆ.

ಜೆಡಿಎಸ್​ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದ ಸುದ್ದಿಗೋಷ್ಠಿ ಮಾತನಾಡಿದ ಅವರು,  ಬಿಜೆಪಿಗೆ ನಾವು ಶರಣಾಗಿಲ್ಲ. ನಾವು ಯಾವುದೇ ಪಕ್ಷದೊಂದಿಗೆ ರಾಜಿ  ಶರಣಾಗುವ ಪ್ರಶ್ನೆ ಇಲ್ಲ. ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳದೇ, ಎಲ್ಲಾ ಕ್ಷೇತ್ರಗಳಲ್ಲಿಯೂ ನಾವು ಸ್ಪರ್ಧಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ 

ಯಲ್ಲಾಪುರ - ಚೈತ್ರಾಗೌಡ
ಹಿರೇಕೆರೂರು -ಉಜನಪ್ಪ ಜಟ್ಟೆಪ್ಪ
ರಾಣೆ ಬೆನ್ನೂರು - ಮಲ್ಲಿಕಾರ್ಜುನ ಹಲಗೇರಿ
ವಿಜಯನಗರ - ಎನ್.ಎಂ.ನಬಿ
ಚಿಕ್ಕಬಳ್ಳಾಪುರ - ಕೆ.ಪಿ.ಬಚ್ಚೇಗೌಡ
ಕೆ.ಆರ್ ಪುರಂ - ಸಿ.ಕೃಷ್ಣಮೂರ್ತಿ
ಯಶವಂತಪುರ - ಟಿ.ಎನ್ ಜವರಾಯಿಗೌಡ
ಶಿವಾಜಿನಗರ - ತನ್ವೀರ್ ಅಹ್ಮದ್​​ವುಲ್ಲಾ
ಹೊಸಕೋಟೆ - ಪಕ್ಷೇತರ ಅಭ್ಯರ್ಥಿಗೆ ಬೆಂಬಲ
ಕೆ.ಆರ್.ಪೇಟೆ - ದೇವರಾಜ್ ಬಿ.ಎಲ್
ಹುಣಸೂರು - ಸೋಮಶೇಖರ್
ಶಿವಾಜಿನಗರ - ತನ್ವೀರ್ ಅಹ್ಮದ್ ವುಲ್ಲಾ

ಇನ್ನು ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ಅವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಜೆಡಿಎಸ್​ಘೋಷಿಸಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com