ಉಪಚುನಾವಣೆಯಿಂದ ಜೆಡಿಎಸ್ ಗಿಲ್ಲ ಅಧಿಕ ಲಾಭ: ಆಯ್ದ ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳು!

ರಾಜ್ಯದಲ್ಲಿ ಡಿಸೆಂಬರ್ 5 ರಂದು ನಡೆಯುವ 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಬಿಜೆಪಿಗೆ ಮಹತ್ವಾದ್ದಾಗಿದೆ, ಏಕೆಂದರೇ ಬಿಜೆಪಿ ಸರ್ಕಾರವನ್ನು ಸ್ಥಿರವಾಗಿಟ್ಟುಕೊಳ್ಳಲು ಈ ಚುನಾವಣೆ ಮಹತ್ವದ್ದಾಗಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಮೈಸೂರು: ರಾಜ್ಯದಲ್ಲಿ ಡಿಸೆಂಬರ್ 5 ರಂದು ನಡೆಯುವ 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಬಿಜೆಪಿಗೆ ಮಹತ್ವಾದ್ದಾಗಿದೆ, ಏಕೆಂದರೇ ಬಿಜೆಪಿ ಸರ್ಕಾರವನ್ನು ಸ್ಥಿರವಾಗಿಟ್ಟುಕೊಳ್ಳಲು ಈ ಚುನಾವಣೆ ಮಹತ್ವದ್ದಾಗಿದೆ.

ಬಿಜೆಪಿ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲದಂತೆ ನೋಡಿಕೊಳ್ಳಲು ಕಾಂಗ್ರೆಸ್ ಅಡ್ಡಗಾಲು ಹಾಕಲು ಮುಂದಾಗಿದೆ. ಹೀಗಿರುವಾಗ ಜೆಡಿಎಸ್ ಒಕ್ಕಲಿಗರ ಪ್ರಾಬಲ್ಯವಿರುವಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಸಲು ನಿರ್ಧರಿಸಿದೆ, ಹುಣಸೂರು, ಕೆಆರ್ ಪೇಟೆ ಮತ್ತು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳನ್ನು ವಾಪಸ್ ಪಡೆದುಕೊಳ್ಳಲು ಪಣ ತೊಟ್ಟಿದೆ.

ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಂತ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಪ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಲಿದ್ದು, ಹೆಚ್ಚಿನ ಸೀಟು ಗೆಲ್ಲಲಿದೆ ಎಂದು  ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಹೇಳಿದ್ದಾರೆ.

ಪಕ್ಷಕ್ಕೆ ಹೆಚ್ಚು ಪ್ರಾಬಲ್ಯವಿರದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಪಕ್ಷ ನಿರ್ದರಿಸಿದೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲು ಪಕ್ಷ ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.   

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com