ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ

ಉಪಚುನಾವಣೆ ನಂತರ ಡಿಸಿಎಂ ಲಕ್ಷ್ಮಣ ಸವದಿ ರಾಜಕೀಯ ಭವಿಷ್ಯ ಡೋಲಾಯಮಾನ! 

ವಿಧಾನಸಭೆ ಚುನಾವಣೆಯಲ್ಲಿ ಸೋತರು ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಈಗ ಅಕ್ಷರಶಃ ಕಂಗಾಲಾಗಿದ್ದಾರೆ. 

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಸೋತರು ಹೈಕಮಾಂಡ್ ಕೃಪಾಕಟಾಕ್ಷದಿಂದ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಈಗ ಅಕ್ಷರಶಃ ಕಂಗಾಲಾಗಿದ್ದಾರೆ. 

ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ತೀರ್ಪು ಸುಪ್ರೀಂಕೋರ್ಟ್​ನಿಂದ ಹೊರಬಿದ್ದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೊತೆಗೆ ಬಹುತೇಕ ಎಲ್ಲರಿಗೂ ಬಿಜೆಪಿ ಟಿಕೆಟ್ ಸಿಗುವುದು ಖಚಿತವಾಗಿದೆ.

ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಎದುರು ಪರಾಭವಗೊಂಡಿದ್ದರು. ಬಳಿಕ ಕುಮಟಹಳ್ಳಿ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 

ಸದ್ಯ ಮಹೇಶ ಕುಮಟಳ್ಳಿ ಗೆ ಅಥಣಿ ಕ್ಷೇತ್ರದ ಟಿಕೆಟ್ ಬಹುತೇಕ ಖಚಿತವಾಗಿದೆ. ಇದರಿಂದ, ಸವದಿಗೆ ಭಾರೀ ನಿರಾಸೆಯಾಗಿದೆ. ಅಲ್ಲದೇ, ಕೋರ್ ಕಮಿಟಿ ಸಭೆಯಲ್ಲಿಯೂ ಸವದಿಯ ಅಳಿವು- ಉಳಿವಿನ‌ ಬಗ್ಗೆ ನಾಯಕರು ಯಾವುದೇ ಚರ್ಚೆ ಕೂಡ ನಡೆಸಲಿಲ್ಲ.

ಇದರ ಜೊತೆಗೆ ಅಥಣಿ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಸವದಿಯವರನ್ನೇ ನೇಮಿಸಿದ್ದಾರೆ. ಅಂದರೆ, ಪಕ್ಷ ನಿಲ್ಲಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಸವದಿಗೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ  ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ನೀಡಿದ್ದಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಹೀಗಿರುವಾಗ ಸವದಿ ಮುಂದಿನ ರಾಜಕೀಯ ಭವಿಷ್ಯಹೇಗೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

Related Stories

No stories found.

Advertisement

X
Kannada Prabha
www.kannadaprabha.com