ಉಪ ಚುನಾವಣೆ ಗೆಲ್ಲಲು ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ

ರಾಜ್ಯ ವಿಧಾನಸಭೆ ಉಪಚುನಾವಣೆಯ ನ್ನು ಎದುರಿಸುವ ಕುರಿತು ಸೂಕ್ತ ಕಾರ್ಯತಂತ್ರ ರೂಪಿಸುವ ಜತೆಗೆ ಚುನಾವಣಾ ಉಸ್ತುವಾರಿಯನ್ನು ಮಾಜಿ  ಸಚಿವರು, ಶಾಸಕರಿಗೆ ವಹಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭೆ ಉಪಚುನಾವಣೆಯ ನ್ನು ಎದುರಿಸುವ ಕುರಿತು ಸೂಕ್ತ ಕಾರ್ಯತಂತ್ರ ರೂಪಿಸುವ ಜತೆಗೆ ಚುನಾವಣಾ ಉಸ್ತುವಾರಿಯನ್ನು ಮಾಜಿ  ಸಚಿವರು, ಶಾಸಕರಿಗೆ ವಹಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ  ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ  ಪಕ್ಷದ ಸಭೆಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ತಂತ್ರಗಾರಿಕೆ ಕುರಿತು ಮಹತ್ವದ ಸಭೆ ನಡೆಯಿತು. 

ಉಪಚುನಾವಣೆಯನ್ನು  ಪ್ರತಿಷ್ಠೆಯಾಗಿ ಪರಿಗಣಿಸಿರುವ ಜೆಡಿಎಸ್ ಶತಾಯಗತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಕಾರ್ಯತಂತ್ರಗಳ ರೂಪುರೇಷೆ ಬಗ್ಗೆ ನಾಯಕರು ಗಂಭೀರ ಚರ್ಚೆ ನಡೆಸಿದರು.

ನಾಳೆ ಸಂಜೆ ವೇಳೆಗೆ ಎಲ್ಲಾ ಕ್ಷೇತ್ರಗಳ ಉಸ್ತುವಾರಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಕಾಂತಾರಾಜುಗೆ ಟಿಕೆಟ್ ನೀಡಲು ಉದ್ದೇಶಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com