ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ: ಉಗ್ರಪ್ಪ

ರಾಜ್ಯದ 418 ಸ್ಥಳೀಯ ಸಂಸ್ಥೆಗಳ ಪೈಕಿ 151 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಗೆ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ವಿ.ಎಸ್. ಉಗ್ರಪ್ಪ
ವಿ.ಎಸ್. ಉಗ್ರಪ್ಪ

ಬೆಂಗಳೂರು: ರಾಜ್ಯದ 418 ಸ್ಥಳೀಯ ಸಂಸ್ಥೆಗಳ ಪೈಕಿ 151 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಗೆ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮತದಾರರೇ ಬಿಜೆಪಿಯನ್ನು 125 ಕ್ಕೆ ಇಳಿಸಿದ್ದು ಮತದಾರರು ಬಿಜೆಪಿಯನ್ನು ತಿರಸ್ಕರಿಸಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಯಡಿಯೂರಪ್ಪ ನೀತಿ ಸಂಹಿತೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಒಂದು ವರ್ಷ ಜೈಲು ಶಿಕ್ಷೆಯಾಗಬಹುದು. ಅನರ್ಹರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮತದಾರರ ಓಲೈಕೆ ಪ್ರಯತ್ನ ಮಾಡಿ, ಕಲಂ 123 ಪ್ರಕಾರ ಜನಪ್ರತಿನಿಧಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಸಿಎಂ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಚುನಾವಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com