ಉಪ ಚುನಾವಣೆ ಅಖಾಡಕ್ಕೆ ದಿನೇಶ್ ಪತ್ನಿ: ಶಿವಾಜಿನಗರದಿಂದ ಟಬು ಸ್ಪರ್ಧೆ?

ಶಿವಾಜಿ ನಗರ ಕ್ಷೇತ್ರ ಉಪ ಚುನಾವಣೆಗೆ ಸ್ಪರ್ಧಿಸಲು ದಿನೇಶ್ ಗುಂಡೂರಾವ್ ಪತ್ನಿ ಟಬು ದಿನೇಶ್ ಗುಂಡೂರಾವ್ ಹೆಸರು ಕೇಳಿ ಬರುತ್ತಿದೆ.

Published: 16th November 2019 01:30 PM  |   Last Updated: 16th November 2019 01:30 PM   |  A+A-


Tabu Gundu Rao

ಟಬು ದಿನೇಶ್ ಗುಂಡೂರಾವ್

Posted By : Shilpa D
Source : ANI

ಶಿವಾಜಿನಗರ:  ಶಿವಾಜಿ ನಗರ ಕ್ಷೇತ್ರ ಉಪ ಚುನಾವಣೆಗೆ ಸ್ಪರ್ಧಿಸಲು ದಿನೇಶ್ ಗುಂಡೂರಾವ್ ಪತ್ನಿ ಟಬು ದಿನೇಶ್ ಗುಂಡೂರಾವ್ ಹೆಸರು ಕೇಳಿ ಬರುತ್ತಿದೆ.

ಶಿವಾಜಿ ನಗರ ಕ್ಷೇತ್ರದಿಂದ ಸ್ಪರ್ಧೆಗೆ ಸಾಕಷ್ಟು ಆಕಾಂಕ್ಷಿಗಳಿದ್ದರು. ಅದರಲ್ಲೂ ಪ್ರಮುಖವಾಗಿ ರಿಜ್ವಾನ್ ಅರ್ಷದ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ ರಿಜ್ವಾನ್ ಅರ್ಷದ್‌ಗೆ ಪಕ್ಷದಲ್ಲಿ ಸಾಕಷ್ಟು ವಿರೋಧ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. 

ಹೀಗಾಗಿ ಟಬು ದಿನೇಶ್ ಗುಂಡೂರಾವ್ ಹೆಸರು ಮುನ್ನೆಲೆಗೆ ಬಂದಿರುವುದು ರಾಜ್ಯ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಕಾರಣವಾಗಿದೆ. 

ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಶಿವಾಜಿನಗರ ಟಿಕೆಟ್ ಫೈಟ್ ಟಬು ದಿನೇಶ್ ಹೆಸರು ಈ ಹಿಂದೆಯೂ ಶಿವಾಜಿ ನಗರ ಕ್ಷೇತ್ರದಿಂದ ಕೇಳಿಬಂದಿತ್ತು. ಆಗ ತಾನು ಚುನಾವಣಾ ಅಖಾಡಕ್ಕೆ ಇಳಿಯುವುದಿಲ್ಲ ಎಂದು ಸ್ವತಃ ಟಬು ಹೇಳಿಕೆಯನ್ನು ನೀಡಿದ್ದರು. ಆದರೆ ಈಗ ಶಿವಾಜಿ ನಗರ ಕ್ಷೇತ್ರದ ಕೆಲ ಕಾರ್ಪೊರೇಟರ್‌ಗಳು ಟಬು ಅವರನ್ನೇ ಕಣಕ್ಕಿಳಿಸಬೇಕು ಎಂಬು ಒತ್ತಡವನ್ನು ಹೇರುತ್ತಿದ್ದಾರೆ. ಮಾತ್ರವಲ್ಲ ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ದಿನೇಶ್ ಗುಂಡೂರಾವ್ ಅವರ ಜೊತೆಗೂ ದೂರವಾಣಿ ಮೂಲಕ ಮಾತುಕತೆಯನ್ನು ನಡೆಸಿದ್ದಾರೆ. 

ಟಬು ಅವರನ್ನು ಕಣಕ್ಕಿಳಿಸಬೇಕೆಂದು ಕೇಂದ್ರ ನಾಯಕರ ಮಟ್ಟದಲ್ಲೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಿದ್ದ ವೇಳೆ ಈ ಕುರಿತಾಗಿಯೂ ಚರ್ಚೆ ನಡೆದಿತ್ತು ಎಂಬ ಮಾಹಿತಿಯಿದೆ. ಆದರೆ ಸ್ವತಃ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಈ ಬಗ್ಗೆ ಎಲ್ಲೂ ಹೇಳಿಕೆಯನ್ನು ನೀಡಿಲ್ಲ. ಆದರೆ ಟಬು ಸ್ಪರ್ಧೆಗೆ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Stay up to date on all the latest ರಾಜಕೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp