ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ

ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

Published: 19th November 2019 07:55 PM  |   Last Updated: 19th November 2019 07:57 PM   |  A+A-


SathishJarakiholi1

ಸತೀಶ್ ಜಾರಕಿಹೊಳಿ

Posted By : Nagaraja AB
Source : UNI

ಬೆಂಗಳೂರು: ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರದೊಂದಿಗೆ ಫಾರ್ಮ್ ಬಿ ಸಲ್ಲಿಸದ ಕಾರಣದಿಂದಾಗಿ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂಬುದಾಗಿ ಚುನಾವಣಾ ಆಯೋಗದ ಕಚೇರಿ ತಿಳಿಸಿದೆ.

ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಯೊಂದಿಗೆ  ಅವರ ಸಹೋದರ ಸತೀಶ್ ಜಾರಕಿಹೊಳಿ ಕೂಡಾ ನಾಮಪತ್ರ ಸಲ್ಲಿಸಿದ್ದರು. ಆದರೆ, ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ  ಅಧಿಕೃತ ಅಭ್ಯರ್ಥಿಯಾಗಿರುವ ಲಖನ್ ಜಾರಕಿಹೊಳಿ ಅವರ ನಾಮಪತ್ರ  ಸಿಂಧುವಾಗಿದೆ. ಪರಿಣಾಮ ಎರಡನೇ ಅಭ್ಯರ್ಥಿಯಾಗಿದ್ದ ಸತೀಶ್ ಜಾರಕಿಹೊಳಿ ಉಮೇದುವಾರಿಕೆ ತಿರಸ್ಕೃತಗೊಂಡಿದೆ.

ಮತ್ತೊಂದೆಡೆ  ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಪಕ್ಷದ ಆದ್ಯತೆಯ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣ ಅವರ ನಾಮಪತ್ರ ಸಿಂಧುವಾಗಿದ್ದು, ಎರಡನೇ ಅಭ್ಯರ್ಥಿಯಾಗಿದ್ದ ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರ ಅಸಿಂಧು ಎಂದು ಚುನಾವಣಾ ಆಯೋಗ ಘೋಷಿಸಿದೆ. 

Stay up to date on all the latest ರಾಜಕೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp