ಉಪಸಮರ: ಸಿಎಂ ಯಡಿಯೂರಪ್ಪಗೆ ಪ್ರತಿಷ್ಠೆಯ ಕಣವಾದ 'ಹೊಸಕೋಟೆ'

ಅಪಾರ ಸಂಖ್ಯೆಯ ಕಾರ್ಯಕರ್ತರು, ಬೆಂಬಲಿಗರ ಜೊತೆಗೆ ಭರ್ಜರಿ ಮೆರವಣಿಗೆ ನಡೆಸಿದ ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದರು. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಅಪಾರ ಸಂಖ್ಯೆಯ ಕಾರ್ಯಕರ್ತರು, ಬೆಂಬಲಿಗರ ಜೊತೆಗೆ ಭರ್ಜರಿ ಮೆರವಣಿಗೆ ನಡೆಸಿದ ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ಷೇತ್ರದ ಎಲ್ಲೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದು, ಪಕ್ಷದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ನಡೆಯಿತು. ಮೆರವಣಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಕೋಲಾರ ಸಂಸದ ಮುನಿಸ್ವಾಮಿ ಮುಂತಾದ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು. 

ಪ್ರಚಾರ ಕಾರ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಕೂಡ ಭಾಗಿಯಾಗಿದ್ದರು. ನಿನ್ನೆ ನಡೆದ ರೋಡ್ ಶೋನಲ್ಲಿ 10 ಸಾವಿರ ಜನರನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಅವರು, ಹೊಸಕೋಟೆ ಗೆಲುವು ನಮ್ಮ ಪ್ರತಿಷ್ಠೆಗೆ ಸಂಬಂಧಿಸಿದ್ದಾಗಿದೆ. 25,000 ಮತಗಳ ಅಂತರದಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಎಂಟಿಬಿ ನಾಗರಾಜ್ ಅವರು ನಮ್ಮ ಸರ್ಕಾರದಲ್ಲಿ ಸಚಿವರಾಗಲಿದ್ದಾರೆಂದು ಹೇಳಿದ್ದಾರೆ. 

ಚುನಾವಣಾ ಸ್ಪರ್ಧೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳುವಲ್ಲಿ ಶರತ್ ವಿಫಲಗೊಂಡಿದ್ದೇ ಆದರೆ, ಬಿಜೆಪಿಗೆ ಕಠಿಣ ಪರಿಸ್ಥಿತಿ ಎದುರಾಗಬಹುದು. 2018ರಲ್ಲಿ ಶರತ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ವೇಳೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಕಣಕ್ಕಿಳಿದಿದ್ದ ಎಂಟಿಬಿ ನಾಗರಾಜ್ ಅವರನ್ನು ಸೋಲು ಕಾಣುವಂತೆ ಮಾಡಿದ್ದರು. 
 
ಪಕ್ಷಕ್ಕೆ ದ್ರೋಹ ಬಗೆದಿರುವ ಶರತ್ ಬಚ್ಚೇಗೌಡ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ನಾಗರಾಜ್ ಅವರಿಗೆ ಶರತ್ ಅವರ ತಂದೆ ಬಚ್ಚೇಗೌಡ ಅವರು ಪ್ರಚಾರ ನಡೆಸುವಂತೆ ಯಡಿಯೂರಪ್ಪ ಅವರು ತಿಳಿಸಿದ್ದಾರೆ.  

ಅಲ್ಲದೆ, ಶರತ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದ್ದು, ಮುಂದೆಂದೂ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಶಾಸಕರು ಹಾಗೂ ತಮ್ಮ ತಮ್ಮ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರ ಪರಿಣಾಮ ಇಂದು ರಾಜ್ಯ ಉಪಚುನಾವಣೆಯನ್ನು ನೋಡುವಂತಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com