'ಮಾನ ಮರ್ಯಾದೆ ಇದ್ದಿದ್ದರೆ ರಾಜಿನಾಮೆ ಕೊಡಬೇಕಿತ್ತು, ಆದರೆ ಶ್ರೀರಾಮುಲು ಒಬ್ಬ ಸ್ವಾರ್ಥಿ'

ಮೈತ್ರಿ ಸರ್ಕಾರದ ಪತನಕ್ಕೆ ತಮ್ಮನ್ನು ಕಾರಣ ಎಂದು ಟೀಕಿಸಿರುವ ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಶ್ರೀರಾಮುಲು
ಶ್ರೀರಾಮುಲು

ಮೈಸೂರು: ಮೈತ್ರಿ ಸರ್ಕಾರದ ಪತನಕ್ಕೆ ತಮ್ಮನ್ನು ಕಾರಣ ಎಂದು ಟೀಕಿಸಿರುವ ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶ್ರೀರಾಮುಲು ಒಬ್ಬ ಸ್ವಾರ್ಥಿ. ಸ್ವಾರ್ಥಕ್ಕೆ ಮಾತನಾಡುವವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶ್ರೀರಾಮುಲು ನನ್ನ ವಿರುದ್ಧ ಸೋತಿದ್ದಾರೆ. ಅದಕ್ಕೆ‌ ಈ ರೀತಿ ಹತಾಶರಾಗಿ ಮಾತನಾಡುತ್ತಾರೆ. ಅವರಿಗೆ ಮಾನ ಮಾರ್ಯಾದೆ ಇದ್ದಿದ್ದೇ ಆದಲ್ಲಿ ಬಿಜೆಪಿ ಅವರನ್ನು ಉಪಮುಖ್ಯಮಂತ್ರಿ ಮಾಡದೇ ಶಾಸಕರಲ್ಲದ ಲಕ್ಷ್ಮಣ್ ಸವದಿಗೆ ಹುದ್ದೆ ನೀಡಿದಾಗಲೇ ರಾಮುಲು ರಾಜೀನಾಮೆ ಕೊಡಬೇಕಿತ್ತು.

ಮಾನ ಮರ್ಯಾದೆ ಇದ್ದಿದ್ದರೆ ಶ್ರೀರಾಮುಲು ಆಗಲೇ ರಾಜೀನಾಮೆ ನೀಡಬೇಕಿತ್ತು  ಡಿಸಿಎಂ‌ ಮಾಡುತ್ತೇವೆ ಅಂತಾ ಪ್ರಚಾರ ಮಾಡಿದರು ಕೊಟ್ಟರಾ ? ಎಂ.ಎಲ್.ಎ ಅಲ್ಲದವರಿಗೆ ಡಿಸಿಎಂ ಪಟ್ಟ ಕೊಟ್ಟಿದ್ದಾರೆ. ಎಸ್.ಟಿ ಗೆ ಶೇ.7 ರಷ್ಟು ಮೀಸಲಾತಿ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಅಂದಿದ್ದರು. ಒಂದು ನಿಮಿಷ ಇರಲ್ಲ ಅಂದರು. ಏನಾಯ್ತು ? ಪಾಪ ಶ್ರೀರಾಮುಲು ಬಗ್ಗೆ ಏನು ಮಾತನಾಡೋದು. ಸ್ವಾರ್ಥ ಮಾಡುವವರೆಲ್ಲಾ ಒಂದು ಕಡೆ ಸೇರಿಕೊಂಡಿದ್ದಾರೆ. ಮೌಲ್ಯ ಸಿದ್ದಾಂತ ಏನೂ ಇಲ್ಲ. ಇವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಟೀಕಿಸಿದ್ದಾರೆ.

ಮೂವತ್ತು ಸಾವಿರ ಸೀರೆಗಳು ಸಿಕ್ಕಿದವು. ಇದು ಯಾರದ್ದು, ಇದು ಯಾರ ದುಡ್ಡು, ಎಲ್ಲಿಂದ ಬಂತು. ಇದು ಅಕ್ರಮವಲ್ಲವೇ? ಕಾನೂನಿನಲ್ಲಿ ಸೀರೆ ಹಂಚಲು ಅವಕಾಶವಿದೆಯೇ? ಯೋಗೇಶ್ವರ್,ವಿಶ್ವನಾಥ್ ಹಾಗೂ ಬಿಜೆಪಿ ಫೋಟೋ ಇದೆ.

ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರ ಮೇಲೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸರ್ಕಾರದಲ್ಲಿದ್ದುಕೊಂಡು ಅಕ್ರಮ ಮಾಡುವ ಇವರಿಗೆ ಯಾವ ನೈತಿಕತೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com