ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ, ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಯಡಿಯೂರಪ್ಪ

"ಮುಂದಿನ ಮೂರೂವರೆ ವರ್ಷಗಳ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿ. ತಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: "ಮುಂದಿನ ಮೂರೂವರೆ ವರ್ಷಗಳ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿ. ತಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಉಪ ಚುನಾವಣೆ ಫಲಿತಾಂಶದ ನಂತರ ಸರ್ಕಾರ ಪನತವಾಗಲಿದೆ ಎಂದು ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರ ಮಾತಿಗೆಲ್ಲಾ ತಲೆ ಕೆಡೆಸಿಕೊಳ್ಳುವ ಅಗತ್ಯವಿಲ್ಲ, ಮುಂದಿನ ಮೂರೂವರೇ ವರ್ಷಗಳ ವರೆಗೆ ನಾನೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತೇನೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ದೇವರ, ಜನರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಮೂರೂವರೇ ವರ್ಷಗಳ ಕಾಲ ಯಾರ ಮಾತಿಗೂ ತಲೆಕೆಡಿಸಿಕೊಳ್ಳದೇ ಮುಂದುವರೆಯುತ್ತೇನೆ. ಅಭಿವೃದ್ಧಿ ಕಾರ್ಯಗಳತ್ತ ಮಾತ್ರ ಗಮನಹರಿಸುತ್ತೇನೆ. ಅನಗತ್ಯ ಟೀಕೆಗಳಿಗೆ ಕಿವಿಗೊಡುವುದಿಲ್ಲ ಎಂದರು. 

ಇದಕ್ಕು ಮುನ್ನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಮಹಿಳಾ ಉದ್ಯಮಿಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಸಿಎಂ, ನೂತನ ಕೈಗಾರಿಕಾ ನೀತಿಯು ಸ್ನೇಹಪರವಾಗಿದ್ದು ಉದ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯು ರಾಜ್ಯದಲ್ಲಿ ಉದ್ಯಮ ವಲಯದ ಅಭ್ಯುದಯಕ್ಕಾಗಿ ನೀಡಿರುವ ಸಲಹೆಗಳನ್ನು ನೂತನ ಕೈಗಾರಿಕಾ ನೀತಿಯಲ್ಲಿ ಅಳವಡಿಸಲಾಗುವುದು. ಬೇರೆ ಬೇರೆ ರಾಜ್ಯಗಳಲ್ಲಿ ಕೈಗಾರಿಕೆಗಳ ಏಳಿಗೆಗೆ ಏನೇನು ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಪೂರಕ ವಾತಾವರಣ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮಹಿಳೆಯರಿಗೆ ಉದ್ಯಮ ಶೀಲತೆ ಬೆಳೆಸಲು ಹಾಗೂ ಸ್ವಾವಲಂಬಿ ಜೀವನ ಸಾಧಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. 1.6 ಲಕ್ಷ ಸ್ತ್ರೀ ಸಹಾಯ ಸಂಘಗಳಲ್ಲಿರುವ 22.30 ಲಕ್ಷ ಮಳೆಯರಿಗೆ ಹೆಚ್ಚು ಶಕ್ತಿ ತುಂಬಲಾಗಿದೆ. ಬ್ಯಾಂಕ್ ಮತ್ತು ಸಹಕಾರಿ ಸಂಘಗಳಿಂದ ಕಡಿಮೆ ಬಡ್ಡಿ ದರದಲ್ಲಿ ಮಹಿಳೆಯರಿಗೆ ಉದ್ಯಮ ನಡೆಸಲು ಸಹಾಯ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಏ.22 ರಿಂದ 26ರವರೆಗೆ ನಡೆಯಲಿರುವ ಕೃಷಿ, ಆಹಾರ, ಶೃಂಗಸಭೆ 20-20 ಸಮಾವೇಶಕ್ಕೆ ರಾಜ್ಯ ಸರ್ಕಾರ 3 ಕೋಟಿ ರೂಪಾಯಿಗಳ ಹಣಕಾಸು ನೆರವು ನೀಡುವುದಾಗಿ ಅವರು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com