ಎಲ್ಲಾ ಕಡೆಯಿಂದಲೂ ತಿರಸ್ಕೃತಗೊಂಡ ಸದಾನಂದ ಗೌಡ ಈಗ ಬಿಜೆಪಿಯಲ್ಲಿ 'ಗೊಬ್ಬರ': ಸಿದ್ದರಾಮಯ್ಯ ವ್ಯಂಗ್ಯ

ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲಾ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ಗೊಬ್ಬರವಾಗಿ ಹೋಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲಾ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ಗೊಬ್ಬರವಾಗಿ ಹೋಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಏಕಾಂಗಿಯಾಗಿ ಹೋಗಿರುವ ಸದಾನಂದ ಗೌಡ ಅವರನ್ನು ಕರ್ನಾಟಕ ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇದ್ದಾರೆಂದು ಹೇಳಿದ್ದಾರೆ. 

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಸದಾನಂದ ಗೌಡ ಬಗ್ಗೆ ಅನುಕಂಪವಿದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲಾ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ಗೊಬ್ಬರವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ತಿಳಿಸಿದ್ದಾರೆ. 

ಇದರಂತೆ ಮತ್ತೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂಬ ಬಿಜೆಪಿ ನಾಯಕರಿಗೆ ಟ್ವೀಟ್ ಈ ಮೂಲಕ ತಿವಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com