12 ಅಭ್ಯರ್ಥಿಗಳು ಕಣದಲ್ಲಿ: ಕೆ.ಆರ್ ಪೇಟೆ, ಯಶವಂತಪುರದಲ್ಲಿ ಜೆಡಿಎಸ್ ಗೆಲುವು ಶತಃಸಿದ್ಧ

ಡಿಸೆಂಬರ್ 5ರಂದು ನಡೆಯುವ ಉಪ ಚುನಾವಣಾ ಕಣದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಹೀಗಾಗಿ ಜೆಡಿಎಸ್ ನಿಂದ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ

ಬೆಂಗಳೂರು: ಡಿಸೆಂಬರ್ 5ರಂದು ನಡೆಯುವ ಉಪ ಚುನಾವಣಾ ಕಣದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಹೀಗಾಗಿ ಜೆಡಿಎಸ್ ನಿಂದ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಹಿರೆಕೇರೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾಚಾರ್ಯ ಸ್ವಾಮೀಜಿ  ನಾಮಪತ್ರ ವಾಪಸ್ ಪಡೆದಿರುವುದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ, ಚುನಾವಣಾ ಆಯೋಗ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಅಂತಿಮಗೊಳಿಸಿದ್ದು, 12 ಮಂದಿ ಕಣದಲ್ಲಿದ್ದಾರೆ.

15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, 12 ರಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗಳಿದ್ದಾರೆ, ಹೊಸಕೋಟೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ತಮ್ಮ ಬೆಂಬಲ ನೀಡುವುದಾಗಿ ದೇವೇಗೌಡ ಹೇಳಿದ್ದಾರೆ. ಆದರೆ ಹಿರೇಕೆರರೂರು ಮತ್ತು ಅಥಣಿಯಲ್ಲಿ ಪಕ್ಷದ ಚಿಹ್ನೆಯಡಿ ಯಾರು ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿಗಳ ಮೇಲೆ ಒತ್ತಡ ಹಾಕಿ ನಾಮಪತ್ರ ಹಿಂಪಡೆಯುವಂತೆ ಮಾಡಿದ್ದಾರೆ. ಹಾಗಾಗಿ ನಮ್ಮ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಥಣಿ ಕ್ಷೇತ್ರದ ಗುರು ದಾಸ್ಯಾಳ  ಹಾಗೂ . ನಾಮಪತ್ರ ಯಾಕೆ ವಾಪಸ್ ಪಡೆದಿದ್ದಾರೆ ಎಂಬುದರ ಬಗ್ಗೆ ಕುಮಾರಸ್ವಾಮಿ ಹೇಳಿದ್ದಾರೆ.  

ಶಿವಾಚಾರ್ಯ ಸ್ವಾಮೀಜಿ ಮೇಲೆ ಅನೇಕ ಮಠಾಧೀಶರು ಒತ್ತಡ ಹಾಕಿದ್ದರು. ದೇಶದಲ್ಲಿ ಅನೇಕ ಜನ ಸ್ವಾಮಿಜಿಗಳು ರಾಜಕೀಯ ಪ್ರವೇಶ ಮಾಡಿ, ಉನ್ನತ ಸ್ಥಾನ ಪಡೆದಿದ್ದಾರೆ. ಆದರೆ  ನಮ್ಮ ರಾಜ್ಯದಲ್ಲಿ ಒಬ್ಬ ಸ್ವಾಮೀಜಿ ಮೇಲೆ, ಬೇರೆ ಸ್ವಾಮಿಜಿಗಳು ಹಾಕುತ್ತಿರುವ ಒತ್ತಡ ನೋಡಿದರೆ ಬೇಜಾರು ಆಗುತ್ತದೆ.

ಶುಕ್ರವಾರದಿಂದದಿಂದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತೇನೆ, ಯಶವಂತಪುರ, ಕೆಆರ್ ಪೇಟೆಯಲ್ಲಿ ಜೆಡಿಎಸ್ ಗೆಲುವು ಶತ: ಸಿದ್ದ  ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com