ರಾಜಕಾರಣದಲ್ಲಿ ನೈತಿಕತೆ ಉಳಿದುಕೊಂಡಿಲ್ಲ: ಎನ್ ಸಿಪಿ-ಬಿಜೆಪಿ ಸರ್ಕಾರ ರಚನೆಗೆ ಎಚ್ ಡಿಕೆ ಕಿಡಿ

ರಾಜಕಾರಣದಲ್ಲಿ ಇವತ್ತು ನೈತಿಕತೆ ಉಳಿದುಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು: ರಾಜಕಾರಣದಲ್ಲಿ ಇವತ್ತು ನೈತಿಕತೆ ಉಳಿದುಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚನೆ ವಿಚಾರವಾಗಿ ಮಾತನಾಡಿದ ಅವರು ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು ಬಂದವರು. ಈಗ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಇಂದು ಸಿದ್ದಾಂತಗಳಿಗೆ ಬೆಲೆ ಇಲ್ಲದಂತಾಗಿದೆ ಎಂದರು.

ಬಿಹಾರದಲ್ಲಿ ನಿತೀಶ್ ಕುಮಾರ್, ಲಾಲು ಪ್ರಸಾದ್​ ಯಾದವ್ ಜೊತೆ ಸೇರಿಕೊಂಡಿದ್ದರು, ಆನಂತರ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದರು. ಬಿಜೆಪಿಯವರು ಎನ್​ಸಿಪಿಯ ಭ್ರಷ್ಟಾಚಾರ ಬಯಲು ಮಾಡುತ್ತೇನೆ ಎಂದು ಹೇಳುತ್ತಿದ್ದರು. 

ಆದರೆ ಇವತ್ತು ಎನ್​ಸಿಪಿ ಜೊತೆ ಬಿಜೆಪಿ ಸರ್ಕಾರ ರಚನೆ ಮಾಡಿದ್ದಾರೆ. ನಮಗೆ ಸಿದ್ಧಾಂತ ಇಲ್ಲ ಎಂದು ಬಿಜೆಪಿಯವರು ಟೀಕೆ ಮಾಡ್ತಾರೆ. ಬಿಜೆಪಿಯವರು ಮಹಾರಾಷ್ಟ್ರದಲ್ಲಿ ಮಾಡಿದ್ದಾದ್ರೂ ಏನು? ಎಂದು ಮಾಜಿ ಸಿಎಂ ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com