ಎರಡು ಜಿಲ್ಲೆಗಳಲ್ಲಿ ಬಿಜೆಪಿ ಖಾತೆ ತೆರೆಯಲಿದೆ:  ಬಿಎಲ್ ಸಂತೋಷ್

ರಾಜ್ಯದ ಎರಡು ಜಿಲ್ಲಗಳಲ್ಲಿ ಬಿಜೆಪಿ ಇನ್ನೂ ತನ್ನ ಖಾತೆ ತೆರೆಯಬೇಕಿದೆ, ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಖಾತೆ ತೆರಯಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.

Published: 24th November 2019 12:21 PM  |   Last Updated: 24th November 2019 12:21 PM   |  A+A-


B.L Santhosh

ಬಿ.ಎಲ್ ಸಂತೋಷ್

Posted By : Shilpa D
Source : The New Indian Express

ಬೆಂಗಳೂರು: ರಾಜ್ಯದ ಎರಡು ಜಿಲ್ಲಗಳಲ್ಲಿ ಬಿಜೆಪಿ ಇನ್ನೂ ತನ್ನ ಖಾತೆ ತೆರೆಯಬೇಕಿದೆ, ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಖಾತೆ ತೆರಯಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಪರ ಪ್ರಚಾರ ನಡೆಸಿ ಮಾತನಾಡಿದ ಸಂತೋಷ್, ಸುಧಾಕರ್ ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ ಎಂದು ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಯೂ ಬಿಜೆಪಿ ಹಲವು ಸೀಟುಗಳನ್ನು ಗೆದ್ದಿತ್ತು, ಆದರೆ ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲ ಸಾಧ್ಯವಾಗಿರಲಿಲ್ಲ,

ಈ ಉಪ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಆಂತರಿಕ ಕಲಹದಿಂದ ಸಮ್ಮಿಶ್ರ ಸರ್ಕಾರ ಪತನವಾಯ್ತು, ಹಲವು ಕ್ಷೇತ್ರಗಳನ್ನು ಹಿಂದಿನ ಸರ್ಕಾರ ನಿರ್ಲಕ್ಷ್ಯ ವಹಿಸಿತ್ತು, ಇದರಿಂದ ಬೇಸತ್ತ ಶಾಸಕರು ಪಕ್ಷದಿಂದ ಹೊರ ಬರಲು ನಿರ್ಧರಿಸಿದರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯವನ್ನು ಮಾದರಿಯಾಗಿಸಬಹುದು ಎಂದು ಹೇಳಿದ್ದಾರೆ.
 

Stay up to date on all the latest ರಾಜಕೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp