ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲದಿದ್ದರೆ ನಾನು ಹೊಣೆಗಾರನಲ್ಲ: ಹೈಕಮಾಂಡ್‍ಗೆ ಸಂದೇಶ ರವಾನಿಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ನಡೆಯುತ್ತಿರುವ ಹದಿನೈದು ಕ್ಷೇತ್ರಗಳ ಉಪ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದರೂ, ಕಾಂಗ್ರೆಸ್‍ನಲ್ಲಿ ಮಾತ್ರ ನಾಯಕರ ನಡುವಿನ ಗೊಂದಲಕ್ಕೆ ತೆರೆ ಬೀಳದಿರುವುದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿದ್ದೆಗೇಡಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹದಿನೈದು ಕ್ಷೇತ್ರಗಳ ಉಪ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದರೂ, ಕಾಂಗ್ರೆಸ್‍ನಲ್ಲಿ ಮಾತ್ರ ನಾಯಕರ ನಡುವಿನ ಗೊಂದಲಕ್ಕೆ ತೆರೆ ಬೀಳದಿರುವುದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿದ್ದೆಗೇಡಿಸಿದೆ.

ಈ ಮಧ್ಯೆ, ಹಿರಿಯ ನಾಯಕರ ಅಸಹಕರಾದಿಂದ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲದಿದ್ದರೆ ನಾನು ಹೊಣೆಗಾರನಲ್ಲ ಎಂಬ ಸಂದೇಶವನ್ನು ಹೈಕಮಾಂಡ್‍ಗೆ ರಾವಾನಿಸುವ ಮೂಲಕ ಸಿದ್ದರಾಮಯ್ಯ ರಕ್ಷಣಾತ್ಮಕ ಆಟ ಆಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ರಹಸ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್‍ನಲ್ಲಿನ ಗೊಂದಲ ಹಾಗೂ ಉಪ ಚುನಾವಣೆಯಲ್ಲಿ ಸಂಪನ್ಮೂಲದ ಕೊರತೆಯ ಬಗ್ಗೆ ವೇಣುಗೋಪಾಲ್‌ಗೆ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

'ನೀವು ಟಾಸ್ಕ್‌ ಕೊಟ್ಟಿದ್ದೀರಿ ಆದರೆ, ಹಿರಿಯರು ಸಾಥ್‌ ಕೊಡುತ್ತಿಲ್ಲ. ಹೀಗಾಗಿ, ಉಪಚುನಾವಣಾ ಪ್ರಚಾರದ ಕಾಂಗ್ರೆಸ್‌ ಸಪ್ಪೆಯಾಗಿದ್ದು, ಒಬ್ಬಂಟಿ ಪ್ರಯತ್ನದಲ್ಲಿಹೈರಾಣಾಗಿದ್ದೇನೆ ಎಂದು ಸಿದ್ದರಾಮಯ್ಯ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳ ಆಯ್ಕೆ ಹಾಗೂ ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ಯಾವುದೇ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅಸಮಾಧಾನಗೊಂಡಿರುವ ಹಿರಿಯ ನಾಯಕರಾದ ಬಿ.ಕೆ.ಹರಿಪ್ರಸಾದ್, ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಎಂ.ವೀರಪ್ಪ ಮೊಯಿಲಿ, ರಾಮಲಿಂಗಾರೆಡ್ಡಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಬಹುತೇಕ ನಾಯಕರು ಉಪ ಚುನಾವಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳದೇ ಕಾಟಾಚಾರಕ್ಕೆ ಪ್ರಚಾರದಲ್ಲಿ ತೊಡಗಿಸಿಕೊಂಡು ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಉಪ ಚುನಾವಣೆ ಪ್ರಕಟಗೊಂಡಾಗಿನಿಂದಲೂ ಸಿದ್ದರಾಮಯ್ಯ ಮತ್ತು ಹಿರಿಯರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಸಿದ್ದರಾಮಯ್ಯ ಬಣದ ಬಹುತೇಕರಿಗೆ ಟಿಕೆಟ್‌ ಸಿಕ್ಕಿದ್ದು ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com