ಮೈತ್ರಿ ಸರ್ಕಾರ ಉರುಳಿಸಿದ್ದು ಎಚ್. ವಿಶ್ವನಾಥ್: ಜಿ. ಪರಮೇಶ್ವರ್ ಆರೋಪ

ರಾಜ್ಯದಲ್ಲಿ ಉಪ ಚುನಾವಣೆಯ ಅಖಾಡ ರಂಗೇರಿದ್ದು, ವಿವಿಧ ಪಕ್ಷಗಳ ಮುಖಂಡರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಮ್ಮ  ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹುಣಸೂರು:  ರಾಜ್ಯದಲ್ಲಿ ಉಪ ಚುನಾವಣೆಯ ಅಖಾಡ ರಂಗೇರಿದ್ದು, ವಿವಿಧ ಪಕ್ಷಗಳ ಮುಖಂಡರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಮ್ಮ  ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಆರಂಭದಿಂದ ಪ್ರಚಾರದಲ್ಲಿ ಕಾಣಿಸಿಕೊಳ್ಳದೆ ದೂರ ಉಳಿದಿದ್ದ  ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಹುಣಸೂರು  ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರು.

ಬನ್ನಿಕುಪ್ಪೆಯಲ್ಲಿ ಮಾತನಾಡಿದ ಅವರು, ಹಿಂದಿನ ಜೆಡಿಎಸ್ - ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿದ್ದು ಅನರ್ಹ ಶಾಸಕ, ಹಾಲಿ ಬಿಜೆಪಿ ಅಭ್ಯರ್ಥಿ ಹೆಚ್ ವಿಶ್ವನಾಥ್ ಎಂದು  ಆರೋಪಿಸಿದರು. 

71 ವರ್ಷದ ನಂತರ ದಲಿತರೊಬ್ಬರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾದರು. ಇನ್ನೇನು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಹಂತದಲ್ಲಿ ನೀವು ಮತ ಹಾಕಿ ಕಳುಹಿಸಿದ ವಿಶ್ವನಾಥ್ ಸರ್ಕಾರ ಬೀಳಿಸಿದರು ಎಂದು ಆರೋಪಿಸಿದರು. 

ವಿಶ್ವನಾಥ್ ನನಗೆ ಆತ್ಮಿಯರು. ನಮ್ಮದು ಅವಿನಾಭಾವ ಸಂಬಂಧವಾಗಿತ್ತು. ಈಗ ನಾವು ದೂರ ಸರಿದಿದ್ದೇವೆ. ಅವರು ಜೆಡಿಎಸ್‌ಗೆ ಹೋದಾಗ ನನ್ನ ಜೊತೆ ಚೆನ್ನಾಗಿದ್ದರು. ಬಳಿಕ ದುಡ್ಡು ತೆಗೆದುಕೊಂಡು ಬಿಜೆಪಿಗೆ ಹೋದ ಮೇಲೆ ನಮ್ಮ ಸಂಬಂಧ ಹಳಸಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com