ಸರ್ಕಾರ ಉರುಳಿಸಿದ್ದೇ ನಾನು: ಸುಧಾಕರ್ ಪರ ಪ್ರಚಾರದಲ್ಲಿ ಎಸ್.ಎಂ ಕೃಷ್ಣ ಹೇಳಿಕೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ನಾನೇ ಪ್ರಮುಖ ಕಾರಣ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಹೇಳಿದ್ದಾರೆ. 

Published: 27th November 2019 08:43 AM  |   Last Updated: 27th November 2019 08:43 AM   |  A+A-


S M Krishna and BJP bypoll candidate Dr Sudhakar

ಸುಧಾಕರ್ ಪರ ಕೃಷ್ಣ ಪ್ರಚಾರ

Posted By : Shilpa D
Source : The New Indian Express

ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ನಾನೇ ಪ್ರಮುಖ ಕಾರಣ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಹೇಳಿದ್ದಾರೆ. 

ಚಿಕ್ಕಬಳ್ಳಾಪುರ  ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಮಾತನಾಡಿದ ಎಸ್. ಎಂ ಕೃಷ್ಣ,
ಕಾಂಗ್ರೆಸ್, ಜೆಡಿಎಸ್ ಎರಡು ಪಕ್ಷಗಳು ಅಧಿಕಾರಕ್ಕಾಗಿ ರಾತ್ರೋರಾತ್ರಿ ಮೈತ್ರಿ ಮಾಡಿಕೊಂಡರು. ಆದರೆ ಅವರ ಮಂತ್ರಿ ಮಂಡಲದಲ್ಲಿದ್ದ ಸಿಎಂ ಒಬ್ಬರು, ಸೂಪರ್ ಸಿಎಂ ಆಡಳಿತದಿಂದ ರಾಜ್ಯ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಯಿತು.

 ಚಿಕ್ಕಬಳ್ಳಾಪುರದ ಒಕ್ಕಲಿಗ ಸಮುದಾಯದ ಮತಗಳನ್ನು ವಿಭಜಿಸುವ ಸಲುವಾಗಿ 87ವರ್ಷದ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿರುವ ಎಸ್ ಎಂ ಕೃಷ್ಣ ಅವರನ್ನು ಬಿಜೆಪಿ ಪ್ರಚಾರಕ್ಕೆ ಕರೆತಂದಿದೆ. 

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬ ಪ್ರಭಾವಿ ಒಕ್ಕಲಿಗರ ನಾಯಕ ಎಚ್.ಡಿ ಕುಮಾರಸ್ವಮಿ ಅವರು ಕೂಡ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

Stay up to date on all the latest ರಾಜಕೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp