ರಾಜ್ಯಸಭಾ ಉಪ ಚುನಾವಣೆ: ಕೆ.ಸಿ. ರಾಮಮೂರ್ತಿ ಸೇರಿ ಇಬ್ಬರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಮತ್ತು ಉತ್ತರ ಪ್ರದೇಶದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಉತ್ತರ ಪ್ರದೇಶದಲ್ಲಿ ಅರುಣ್​​ ಸಿಂಗ್​ಗೆ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್​ ಬಿಟ್ಟು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿಗೆ ಟಿಕೆಟ್​ ನೀಡಲಾಗಿದೆ.
ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ
ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ

ನವದೆಹಲಿ: ಕರ್ನಾಟಕ ಮತ್ತು ಉತ್ತರ ಪ್ರದೇಶದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಉತ್ತರ ಪ್ರದೇಶದಲ್ಲಿ ಅರುಣ್​​ ಸಿಂಗ್​ಗೆ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್​ ಬಿಟ್ಟು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿಗೆ ಟಿಕೆಟ್​ ನೀಡಲಾಗಿದೆ.

ಮಾಜಿ ಸಂಸದ ಕೆ.ಸಿ.ರಾಮಮೂರ್ತಿ ಕಾಂಗ್ರೆಸ್​​ ಪಕ್ಷದ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು.

ರಾಮಮೂರ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ಕೂಡ ಘೋಷಿಸಿದ್ದು, ಡಿಸೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ರಾಜ್ಯಸಭಾ ಸದಸ್ಯತ್ವ ತೊರೆದು ಬಿಜೆಪಿ ಸೇರಿದ ರಾಮಮೂರ್ತಿ ಅವರೇ ಅಭ್ಯರ್ಥಿಯಾಗುತ್ತಾರೆಂಬ ನಿರೀಕ್ಷೆ ಇತ್ತು. ಅದರಂತೆ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯು ರಾಮಮೂರ್ತಿ ಅವರನ್ನು ಬುಧವಾರ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ರಾಮಮೂರ್ತಿ ಅವರ ಆಯ್ಕೆ ಸುಲಭವಾಗಿದೆ. ಲಭ್ಯ ಮಾಹಿತಿಗಳ ಪ್ರಕಾರ ಜೆಡಿಎಸ್‌ ಅಭ್ಯರ್ಥಿಯನ್ನು ಹಾಕುವುದಿಲ್ಲ, ಆದರೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಸದ್ಯದಲ್ಲೇ ಪ್ರಕಟಿಸುವ ಸಾಧ್ಯತೆಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com