ಬಿಬಿಎಂಪಿ ಮೇಯರ್- ಉಪ ಮೇಯರ್ ಚುನಾವಣೆ: ಮೂರು ಪಕ್ಷಗಳ ಅಭ್ಯರ್ಥಿಗಳು ಫೈನಲ್ 

ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಇಂದು ಬೆಳಗ್ಗೆ 10 ನಡೆಯಲಿದ್ದು, ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಫೈನಲ್ ಮಾಡಿವೆ.
ಬಿಬಿಎಂಪಿ( ಸಂಗ್ರಹ ಚಿತ್ರ)
ಬಿಬಿಎಂಪಿ( ಸಂಗ್ರಹ ಚಿತ್ರ)

ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಇಂದು ಬೆಳಗ್ಗೆ ನಡೆಯಲಿದ್ದು, ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಫೈನಲ್ ಮಾಡಿವೆ.

ಬಿಜೆಪಿಯಿಂದ ಜೋಗುಪಾಳ್ಯ ವಾರ್ಡ್  ಕಾರ್ಪೋರೇಟರ್ ಗೌತಮ್ ಕುಮಾರ್ ಅವರ ಹೆಸರನ್ನು ಫೈನಲ್ ಮಾಡಲಾಗಿದೆ.  ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇನ್ನು ಉಪ ಮೇಯರ್ ಅಭ್ಯರ್ಥಿಯಾಗಿ ಗುರುಮೂರ್ತಿ ರೆಡ್ಡಿ ಹೆಸರನ್ನು ಫೈನಲ್ ಮಾಡಲಾಗಿದ್ದು ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿಯಿದೆ.

ಇನ್ನು ಈ ಬಾರಿಯೂ ಬಿಬಿಎಂಪಿಯಲ್ಲಿ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದೆ. ಮೈತ್ರಿ ಅನ್ವಯ ಕಾಂಗ್ರೆಸ್‍ಗೆ ಮೇಯರ್ ಸ್ಥಾನ ಹಾಗೂ ಜೆಡಿಎಸ್‍ಗೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಿಕೊಳ್ಳಲಾಗಿದೆ.

ಮೈತ್ರಿ ಅನ್ವಯ ಕಾಂಗ್ರೆಸ್, ಜೆಡಿಎಸ್‍ನಿಂದ ಮೇಯರ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ದತ್ತಾತ್ರೇಯ ವಾರ್ಡ್ ಸದಸ್ಯರಾದ ಸತ್ಯನಾರಾಯಣರನ್ನು  ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧಿಕೃತವಾಗಿ ಪ್ರಕಟಿಸಿದೆ. ಮಂಗಳವಾರ ಸತ್ಯನಾರಾಯಣ ಅವರು ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಇತ್ತ ಉಪಮೇಯರ್ ಸ್ಥಾನಕ್ಕೆ ಅಂತಿಮ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಿದ್ದು, ಶಕ್ತಿ ಗಣಪತಿ ವಾರ್ಡ್ 74ರ ಪಾಲಿಕೆ ಸದಸ್ಯೆ ಗಂಗಮ್ಮ ರಾಜಣ್ಣ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಲು ಜೆಡಿಎಸ್ ವರಿಷ್ಠರು ಸೂಚನೆ ನೀಡಿದ್ದಾರೆ.

ಇನ್ನು ಬಿಬಿಎಂಪಿಯ ನಾಲ್ಕು ಸ್ಥಾಯಿ ಸಮಿತಿಗಳಿಗೂ ಇಂದೇ ಚುನಾವಣೆ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ, 11.30ರ ವೇಳೆಗೆ ಚುನಾವಣೆ ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com