ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ನಾನೇ: ಸಿದ್ದರಾಮಯ್ಯ

ವಿಧಾನಸಭೆ ಅಧಿವೇಶನ ಅ.10ರಿಂದ ನಡೆಯಲಿದ್ದು, ವಿಧಾನಸಭೆಯಲ್ಲಿ ಅತೀ ದೊಡ್ಡ ಪಕ್ಷವೆನಿಸಿಕೊಂಡಿರುವ ಕಾಂಗ್ರೆಸ್ ಪಾಳಯದಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಇನ್ನೂ ಬಾಕಿಯಿದ್ದು, ಈ ನಡುವಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ನಾನೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಅಧಿವೇಶನ ಅ.10ರಿಂದ ನಡೆಯಲಿದ್ದು, ವಿಧಾನಸಭೆಯಲ್ಲಿ ಅತೀ ದೊಡ್ಡ ಪಕ್ಷವೆನಿಸಿಕೊಂಡಿರುವ ಕಾಂಗ್ರೆಸ್ ಪಾಳಯದಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಇನ್ನೂ ಬಾಕಿಯಿದ್ದು, ಈ ನಡುವಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ನಾನೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ವಿರೋಧ ಪಕ್ಷದ ನಾಯಕರ ಆಯ್ಕೆಯನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಶೀಘ್ರದಲ್ಲಿಯೇ ಸ್ಪೀಕರ್'ಗೆ ಬರೆಯಲಿದ್ದಾರೆ. ಕಾಂಗ್ರೆಸ್ ನಲ್ಲಿ ಮುಂದೆಯೂ ಶಾಸಕಾಂಗ ಪಕ್ಷದ ನಾಯಕನಾಗಿ ನಾನೇ ಇರುತ್ತೇನೆಂದು ಹೇಳಿದ್ದಾರೆ. 

ಇದೇ ವೇಳೆ ನೆರೆ ಸಂತ್ರಸ್ತರ ಕುರಿತು ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. 

ಚಂದ್ರಯಾನ-2 ನೋಡಲು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ಮೋದಿಯವರಿಗೆ, ಪತ್ರವೊಂದನ್ನು ಬರೆಯಲಾಗಿತ್ತು. ಆದರೆ, ನಮ್ಮ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನೆರೆ ಪರಿಹಾರ ಕೇಳಲು ರಾಜ್ಯ ಸರ್ಕಾರ ಹೆದರುತ್ತಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಈ ಬಾರಿಯ ಅಧಿವೇಶನ ಬೆಂಗಳೂರಿನಲ್ಲಿಯೇ ನಡೆಯಲಿದೆ ಎಂದು ಬಿಜೆಪಿ ಸರ್ಕಾರ ಘೋಷಣೆ ಮಾಡಿದ್ದರೂ, ಸಿದ್ದರಾಮಯ್ಯ ಅವರು ಮಾತ್ರ ಬೆಳಗಾವಿ ಸುವರ್ಣ ಸೌಧದಲ್ಲಿಯೇ ನಡೆಯಬೇಕೆಂದು ಆಗ್ರಹಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com