ನಮ್ಮಂತವರು ಮುಖ್ಯಮಂತ್ರಿಯಾಗಿದ್ದರೆ ರಾಜೀನಾಮೆ:ಎಚ್.ಡಿ.ರೇವಣ್ಣ ವ್ಯಂಗ್ಯ

ಜಂಬೋ ಸರ್ಕಸ್​ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ  ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ವ್ಯಂಗ್ಯವಾಡಿದ್ದಾರೆ.

Published: 01st October 2019 06:09 PM  |   Last Updated: 01st October 2019 06:11 PM   |  A+A-


Collection photo

ಸಂಗ್ರಹ ಚಿತ್ರ

Posted By : Nagaraja AB
Source : UNI

ಹಾಸನ: ಜಂಬೋ ಸರ್ಕಸ್​ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ  ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ನಮ್ಮಂತಹವರು ಯಾರಾದರೂ ಇದ್ದರೆ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧಿಕಾರದಿಂದ ಕೆಳಗೆ ಇಳಿಯುತ್ತಿದ್ದೆವು ಎಂದು ಹೇಳಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ  ಪುತ್ರ ನಮ್ಮ ಸಮುದಾಯದ ಸ್ವಾಮೀಜಿ ಬಗ್ಗೆ  ತಲೆಕೆಡಿಸಿ ಕೊಳ್ಳುವ ಅವಶ್ಯಕತೆ ಇಲ್ಲ.ನಮ್ಮ ಸಮುದಾಯದ ಭಕ್ತರಿದ್ದಾರೆ ಅವರು ವಿಚಾರಿಸಿಕೊಳ್ಳುತ್ತಾರೆ ಎಂದು ಅವರು ಬಿ.ವೈ.ವಿಜಯೇಂದ್ರ ವಿರುದ್ಧ ಎಚ್ಚರಿಕೆ ನೀಡಿದರು.

ಬಿ.ವೈ.ಜಯೇಂದ್ರ  ಇಷ್ಟು ದಿನ ವನವಾಸದಲ್ಲಿದ್ದರು. ಈಗ ಅವರ ಖಜಾನೆ ಖಾಲಿಯಾಗಿದೆ ಅದಕ್ಕೆ ಯಡಿಯೂರಪ್ಪ  ಪುತ್ರ ಖಜಾನೆ ಭರ್ತಿ ಮಾಡಿಕೊಳ್ಳಲಿ. ಹಿಂದೆ ಕೇಂದ್ರ ಸರ್ಕಾರದಿಂದ ಹಾಸನ, ಮಂಡ್ಯ,  ತುಮಕೂರು ಜಿಲ್ಲೆಯ ಜೆಡಿಎಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ.ಕುಮಾರಸ್ವಾಮಿ, ದೇವೇಗೌಡರ ಹಾಗೂ ನನ್ನ ದೂರವಾಣಿ  ಕದ್ದಾಲಿಕೆ ಮಾಡಿದ್ದಾರೆ ಎಂದು ಅವರು ಕೇಂದ್ರ  ಸರ್ಕಾರದ ವಿರುದ್ಧ ಆರೋಪ ಮಾಡಿದರು.

ನೆರೆ ಸಂತ್ರಸ್ಥರ ಪರಿಹಾರ ನೀಡಲಾಗದೆ  ವಿಚಾರ ಮುಚ್ಚಿ ಹಾಕಲು ನಿರ್ಮಲಾ ನಂದ ಸ್ವಾಮೀಜಿ ದೂರವಾಣಿ ಕದ್ದಾಲಿಕೆಯ ಆರೋಪ ಮಾಡಿ  ಅನಾವಶ್ಯಕ ಚರ್ಚೆ ಮಾಡುತ್ತಿದ್ದಾರೆ. ವಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರದಿಂದ  ಸಾಧ್ಯವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

Stay up to date on all the latest ರಾಜಕೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp