ಸರ್ಕಾರದಿಂದ ಜಾತಿ ಗಣತಿ ವರದಿ ತಿರಸ್ಕಾರ: ಕಾಂಗ್ರೆಸ್ ತೀವ್ರ ಕಿಡಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿದ್ದ ಜಾತಿ ಸಮೀಕ್ಷೆ ವರದಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತಿರಸ್ಕರಿಸಲು ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿದ್ದ ಜಾತಿ ಸಮೀಕ್ಷೆ ವರದಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತಿರಸ್ಕರಿಸಲು ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸರ್ಕಾರಿ ಸೌಲಭ್ಯಗಳು ಪ್ರತಿಯೊಬ್ಬರಿಗೂ ಸಿಗಬೇಕೆನ್ನುವ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ವರದಿ ಸಿದ್ಧಪಡಿಸಿತ್ತು. ಇದೀಗ ಯಡಿಯೂರಪ್ಪ ಸರ್ಕಾರ ಅದನ್ನು ತಿರಸ್ಕರಿಸಲು ಮುಂದಾಗಿದ್ದು, ಕಾಂಗ್ರೆಸ್ ನಾಯಕರಲ್ಲಿ ತೀವ್ರ ಅಸಮಾಧಾನ ಉಂಟಾಗುವಂತೆ ಮಾಡಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು, ಜಾತಿ ಜನಗಣತಿ ವರದಿಯನ್ನು ಬಿಜೆಪಿ ಸರ್ಕಾರ ತಿರಸ್ಕರಿಸಿರುವ ನಡೆ ಖಂಡನೀಯ ಎಂದು ಹೇಳಿದ್ದಾರೆ. 

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರ ಕಲ್ಯಾಣಕ್ಕಾಗಿ ಈ ಜಾತಿ ಜನಗಣತಿ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಅದನ್ನು ತಿರಸ್ಕರಿಸಿದ್ದು, ಇದು ಹಿಂದುಳಿದ ವರ್ಗದವರ ಮೇಲೆ ಬಿಜೆಯಿ ಎಷ್ಟರ ಮಟ್ಟಿಗೆ ಹಿತಾಸಕ್ತಿ ತೋರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com