ಉಪ ಚುನಾವಣೆ: ಯಡಿಯೂರಪ್ಪ, ಕಟೀಲ್ ಚರ್ಚೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂಬಂತಹ ಊಹಾಪೋಹಗಳ ನಡುವೆ, ಸರ್ಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.
ಕಟೀಲ್, ಬಿಎಸ್ ಯಡಿಯೂರಪ್ಪ
ಕಟೀಲ್, ಬಿಎಸ್ ಯಡಿಯೂರಪ್ಪ

ಬೆಂಗಳೂರು:ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂಬಂತಹ ಊಹಾಪೋಹಗಳ ನಡುವೆ, ಸರ್ಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಮೇಯರ್ ಆಯ್ಕೆ ಹಾಗೂ ಭಾನುಪ್ರಕಾಶ್ ಹಾಗೂ ನಿರ್ಮಲಾ ಕುಮಾರ್ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕಟೀಲ್ ನಿರ್ಧಾರದ ಬಗ್ಗೆ ಯಡಿಯೂರಪ್ಪ ಅವರಿಗೆ ಅಸಮಾಧಾನವಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಆದಾಗ್ಯೂ, ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ಬಳಿಕ  ಮೇಯರ್ , ಉಪಮೇಯರ್ ಸೇರಿದಂತೆ ನಳಿನ್ ಕುಮಾರ್ ಕಟೀಲ್ ಅವರ ನಿರ್ಧಾರದ ಬಗ್ಗೆ ಯಡಿಯೂರಪ್ಪ ಅವರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಹಿರಿಯ ಬಿಜೆಪಿ ಮುಖಂಡರು ಹೇಳಿದ್ದಾರೆ. 

ಯಡಿಯೂರಪ್ಪ ಅವರೊಂದಿಗಿನ 30 ನಿಮಿಷಗಳ ಸಭೆ ಬಳಿಕ ಮಾತನಾಡಿದ ಕಟೀಲ್, ಪ್ರವಾಹ ಪರಿಸ್ಥಿತಿ, ಉಪ ಚುನಾವಣೆ ಸಿದ್ಧತೆ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. 

ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಿದರೆ ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಪಕ್ಷಕ್ಕೆ ಕಠಿಣಕರವಾಗಿ ಪರಿಣಮಿಸಲಿದೆ.  ಇದಕ್ಕೆ ಅನೇಕ ಕ್ಷೇತ್ರಗಳಿಗೆ ಬಹಿರಂಗವಾಗಿ  ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com