ಸಿಎಂ ಯಡಿಯೂರಪ್ಪ ಮತ್ತು ಪಿಎಂ ಮೋದಿಯವರ ಮಧ್ಯೆ ಎಲ್ಲವೂ ಸರಿಯಾಗಿಲ್ಲ: ಹೆಚ್ ಡಿ ಕುಮಾರಸ್ವಾಮಿ 

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ಮೂಲಕ ನಿನ್ನೆ ರಾಜಕೀಯ ವಲಯವನ್ನು ಚಕಿತಕ್ಕೀಡುಮಾಡಿದರು.  
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

ಮೈಸೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ಮೂಲಕ ನಿನ್ನೆ ರಾಜಕೀಯ ವಲಯವನ್ನು ಅಚ್ಚರಿಗೀಡು ಮಾಡಿದರು. 

ರಾಜ್ಯದ ಪ್ರವಾಹ ಪರಿಸ್ಥಿತಿ ಮತ್ತು ಕೊಡಗು ಜಿಲ್ಲೆಯ  ಭೂಕುಸಿತದ ಬಗ್ಗೆ ಪ್ರಧಾನಿಗಳು ಕಾಲಕಾಲಕ್ಕೆ ಮಾಹಿತಿ ಕೇಳುತ್ತಿದ್ದು, ದುರದೃಷ್ಟವಶಾತ್ ಅವರದ್ದೇ ಪಕ್ಷದ ಮುಖ್ಯಮಂತ್ರಿ ಪ್ರಧಾನಿಯವರನ್ನು ಭೇಟಿ ಮಾಡಿ ವಸ್ತುಸ್ಥಿತಿ ಹೇಳಿ ಪರಿಹಾರ ಕೇಳಲು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದರು.


ಮೈಸೂರಿನಲ್ಲಿ ನಿನ್ನೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಡುವೆ ನಂಬಿಕೆಯ ಕೊರತೆಯಿದೆ. ಪ್ರಧಾನ ಮಂತ್ರಿಗಳು ಕಳೆದ ವರ್ಷ ಕೊಡಗಿನಲ್ಲಿ ಪ್ರವಾಹ ಉಂಟಾಗಿದ್ದ ಸಂದರ್ಭದಲ್ಲಿ ತಮ್ಮ ಜೊತೆ ಮಾತುಕತೆ ನಡೆಸಿದ್ದರು ಅಲ್ಲದೆ ವಿಧಾನ ಸೌಧದಲ್ಲಿ ಕೂಡ ಚರ್ಚೆ ಮಾಡಲು ಸಿದ್ದರಿದ್ದರು. ಆದರೆ ಇಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಜನರ ಜೀವನ ಜೊತೆ ಆಟವಾಡುತ್ತಿದೆ. ಕೇಂದ್ರದಿಂದ ಪರಿಹಾರ ಹೊರತುಪಡಿಸಿ ರಾಜ್ಯದ ಪರಿಹಾರ ಕೆಲಸಗಳನ್ನು ಇಲ್ಲಿನ ಸಂಪನ್ಮೂಲ ಬಳಸಿಕೊಂಡು ಒದಗಿಸಬೇಕು ಎಂದರು.


ರಾಜ್ಯಕ್ಕೆ ಹಣಕಾಸು ನೆರವು ಒದಗಿಸಿಕೊಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸಹ ಆರೋಪಿಸಿದ್ದಾರೆ. ತಾನು ಏನು ಬೇಕಾದರೂ ಮಾಡಬಹುದು ಎಂಬ ಧೋರಣೆಯನ್ನು ಕೇಂದ್ರ ಸರ್ಕಾರ ತಳೆದಂತಿದೆ. ರಾಜ್ಯದ ಇಂದಿನ ಸ್ಥಿತಿಗೆ ಕೇಂದ್ರ ಸರ್ಕಾರವೇ ಕಾರಣ. ಪ್ರಧಾನ ಮಂತ್ರಿಗಳನ್ನು ಪ್ರಶ್ನೆ ಮಾಡಲು ರಾಜ್ಯದ ಬಿಜೆಪಿ ಸಂಸದರು ಹೆದರುತ್ತಿದ್ದಾರೆ ಎಂದು ಟೀಕಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com