ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್'ಗೆ ವಿಪಕ್ಷ ನಾಯಕ ಸ್ಥಾನ? 

8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ಕಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್
ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್

ತುಮಕೂರು: 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ಕಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಿರೋಧ ಪಕ್ಷಧ ನಾಯಕ ಸ್ಥಾನಕ್ಕೆ ಆಯ್ಕೆ ಮಾಡುವ ಸಲುವಾಗಿ ಪರಮೇಶ್ವರ್ ಅವರ ಆಪ್ತರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಧುಸೂಧನ್ ಅವರನ್ನು ನೇಮಕ ಮಾಡಿದ್ದು, ವಿರೋಧ ಪಕ್ಷಧ ನಾಯಕ ಸ್ಥಾನ ಕುರಿತು  ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳನ್ನು ಮಧುಸೂದನ್ ಅವರು ಸಂಗ್ರಹಿಸಲಿದ್ದಾರೆ. ಶನಿವಾರ ಮಧುಸೂಧನ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆಂದು ವರದಿಗಳು ತಿಳಿಸಿವೆ.

ರಾಷ್ಟ್ರೀಯ ಕಾಂಗ್ರೆಸ್ ಮಟ್ಟದಲ್ಲಿ ಮದುಸೂಧನ್ ಹಾಗೂ ಪರಮೇಶ್ವರ್ ಅವರು ವಿವಿಧ ಸಮಿತಿಗಳಲ್ಲಿ ಕೆಲಸ ಮಾಡಿದ್ದು, 2014ರ ಲೋಕಸಭಾ ಚುನಾವಣೆ ವೇಳೆ ಗುಜರಾತ್ ಕ್ಷೇತ್ರದಲ್ಲಿ ಇಬ್ಬರೂ ನಾಯಕರು ಪ್ರಚಾರ ಕಾರ್ಯ ನಡೆಸಿದ್ದರು. ಮಧುಸೂಧನ್ ಅವರು ರಾಜ್ಯ ಕಾಂಗ್ರೆಸ್ ಘಟಕ ಉಸ್ತುವಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಇಬ್ಬರ ನಡುವೆ ಇಂದಿಗೂ ಉತ್ತಮ ಬಾಂಧವ್ಯ, ಸ್ನೇಹವಿದೆ. 

ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಹೆಚ್.ಕೆ.ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯಲಿದ್ದು, ಸಿದ್ದರಾಮಯ್ಯ ಅವರಿಗೆ ಎಂದಿನಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಮುಂದುವರೆಯಲಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಪಕ್ಷ ನೀಡಲಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com