ಪ್ರವಾಹ ಪರಿಹಾರ: ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ

ಪ್ರವಾಹದಿಂದಾದಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ನಿರೀಕ್ಷೆಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದ ಆಡಳಿತಾರೂಢ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು: ಪ್ರವಾಹದಿಂದಾದಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ನಿರೀಕ್ಷೆಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದ ಆಡಳಿತಾರೂಢ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಪ್ರವಾಹದಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ನಷ್ಟವನ್ನು ಭರಿಸಲಾಗದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಸಂಕಷ್ಟವನ್ನು ಸರ್ಕಾರ ಆಲಿಸುತ್ತಿಲ್ಲ. ಪ್ರವಾಹದಿಂದ ಚಿಕ್ಕಮಗಳೂರಿನ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿದ್ದಾರೆಂದು ಹೇಳಿದ್ದಾರೆ. 

ಇದೇ ವೇಳೆ ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿರುವ ಅವರು, ರೈತರಿಗೆ ಬೆಂಬಲವಾಗಿ ನಿಲ್ಲಬೇಕಿದ್ದ ಚಿಕ್ಕಮಗಳೂರು ಸಂಸದರು ಕಾಣೆಯಾಗಿದ್ದಾರೆ. ರೈತರ ಪರವಾಗಿ ಅವರಲ್ಲಿರುವ ಕಾಳಜಿ ಇದರಿಂದ ತಿಳಿದುಬರುತ್ತದೆ ಎಂದು ಟೀಕಿಸಿದ್ದಾರೆ. 

ಕುಮಾರಸ್ವಾಮಿಯವರು ಏನನ್ನು ತೋರ್ಪಡಿಸುತ್ತಿದ್ದಾರೆ? ರೈತರ ನೋವುಗಳು ನನಗೆ ತಿಳಿದಿಲ್ಲ ಎಂದು ಅವರು ಹೇಳಿದರೆ, ಆಲೂಗಡ್ಡೆ ಬೆಳೆಯುವ ಮೂಲಕ ಶ್ರೀಮಂತರಾಗಿದ್ದರನ್ನು ಮೊದಲು ಅವರೇ ತಿಳಿದುಕೊಳ್ಳಬೇಕು ಎಂದು ಇದೇ ವೇಳೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. 

ಇದರಂತೆ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಕಂಡ ಅವರು, ಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ಹಲವು ನಿಯಮಾವಳಿ ಹಾಗೂ ಯೋಜನೆಗಳನ್ನಿಟ್ಟುಕೊಂಡಿದ್ದು, ಆ ಮೂಲಕ ಬಿಡುಗಡೆ ಮಾಡುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com