ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿಗೆ ಜಯ: 'ಕೈ' ಒಳಜಗಳದ ಬಗ್ಗೆ ಪ್ರತಿಕ್ರಿಯಿಸಲು ಖರ್ಗೆ ನಕಾರ

ರಾಜ್ಯ ಕಾಂಗ್ರೆಸ್ ನ ಪ್ರಮುಖ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ.

Published: 09th October 2019 09:02 AM  |   Last Updated: 09th October 2019 09:02 AM   |  A+A-


Mallikarjun Kharge

ಮಲ್ಲಿಕಾರ್ಜುನ ಖರ್ಗೆ

Posted By : Shilpa D
Source : The New Indian Express

ಕಲಬುರಗಿ: ರಾಜ್ಯ ಕಾಂಗ್ರೆಸ್ ನ ಪ್ರಮುಖ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ, ರಾಜ್ಯ ನಾಯಕರ ಒಳಜಗಳದಿಂದ ನೇಮಕಾತಿ ಪ್ರಕ್ರಿಯೆ ವಿಳಂಭವಾಗುತ್ತಿದೆ,  ಸಂಬಂಧ ಹೈಕಮಾಂಡ್ ಅಂತಿಮ ನಿರ್ಧಾರವನ್ನು ಶೀಘ್ರವೇ ಪ್ರಕಟಿಸಲಿದೆ ಎಂದು ಖರ್ಗೆ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಜನತೆ ಅಸಮಾಧಾನಗೊಂಡಿದ್ದಾರೆ,ಸಸರಿಯಾದ ರೀತಿಯಲ್ಲಿ ಪ್ರವಾಹ ಪರಿಹಾರ ಕಾರ್ಯ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ

ಇನ್ನೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎನ್​ಸಿಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿರುವ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷದ ಕಮಿಟಿ ತೀರ್ಮಾನಿಸಲಿದೆ. ಟಿಕೆಟ್ ವಿತರಣೆ ಪಾರದರ್ಶಕವಾಗಿರಲಿದ್ದು ಯಾವುದೇ ವ್ಯಕ್ತಿಯ ವ್ಯಯಕ್ತಿಕ ಹಸ್ತಕ್ಷೇಪಕ್ಕೆ ಆಸ್ಪದವಿಲ್ಲ. ಅನೇಕರಿಗೆ ಟಿಕೆಟ್ ಕೈತಪ್ಪಲು ನಾನೇ ಕಾರಣ ಎಂದೂ ಹೇಳಲಾಗುತ್ತಿದೆ. ಆದರೆ, ಇದು ಸತ್ಯಕ್ಕೆ ದೂರವಾದ ಮಾತು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಯನ್ನು ಇತರೆ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಎದುರಿಸುತ್ತಿದ್ದೇವೆ. ಸೂಕ್ತ ಅಭ್ಯರ್ಥಿಗಳನ್ನು ಹುಡುಕಿ ಟಿಕೆಟ್ ನೀಡಲಾಗಿದೆ. ಸೋಲು ಗೆಲುವು ಭವಿಷ್ಯದಲ್ಲಿ ನಿರ್ಧಾರವಾಗಲಿದೆ. ಒಬ್ಬ ವ್ಯಕ್ತಿಯ ಅಸಮಾಧಾನ ಎಲ್ಲರ ಅಸಮಾಧಾನ ಅಲ್ಲಾ. ಹೀಗಾಗಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪಕ್ಷ ಗೆಲ್ಲುವ ವಿಶ್ವಾಸ ಇದೆ ಎಂದು ಅವರು ತಿಳಿಸಿದ್ದಾರೆ.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp