ಬಿಎಸ್ ವೈ ತಂತ್ರಕ್ಕೆ ಶರತ್ ಬಚ್ಚೇಗೌಡ ಸೆಡ್ಡು, ಗೃಹ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿ, ಉಪ ಚುನಾವಣೆ ಸ್ಪರ್ಧೆಗೆ ಸಿದ್ಧತೆ

ಅನರ್ಹ ಶಾಸಕರಿಗೆ ಸ್ಥಾನಮಾನ ಕಲ್ಪಿಸುವ ಸಲುವಾಗಿ ಸಿಎಂ ಯಡಿಯೂರಪ್ಪ ಹೂಡಿದ್ದ ರಣತಂತ್ರಕ್ಕೆ ಬಿಜೆಪಿ ಶರತ್ ಬಚ್ಚೇಗೌಡ ಸೆಡ್ಡು ಹೊಡೆದಿದ್ದು, ತಮಗೆ ನೀಡಲಾಗಿದ್ದ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಕೋಟೆ: ಅನರ್ಹ ಶಾಸಕರಿಗೆ ಸ್ಥಾನಮಾನ ಕಲ್ಪಿಸುವ ಸಲುವಾಗಿ ಸಿಎಂ ಯಡಿಯೂರಪ್ಪ ಹೂಡಿದ್ದ ರಣತಂತ್ರಕ್ಕೆ ಬಿಜೆಪಿ ಶರತ್ ಬಚ್ಚೇಗೌಡ ಸೆಡ್ಡು ಹೊಡೆದಿದ್ದು, ತಮಗೆ ನೀಡಲಾಗಿದ್ದ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಶರತ್‌ ಬಚ್ಚೇಗೌಡ, 'ಹೊಸಕೋಟೆಯ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಮುಂದಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿರುವುದರಿಂದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ನನಗೆ ಸಾಧ್ಯವಿಲ್ಲ. ಆದ್ದರಿಂದ ಆ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

'ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಶ್ವಾಸವಿಟ್ಟು ನನಗೆ  ಕೊಟ್ಟಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ. ಈ ಕುರಿತು ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಇಲ್ಲ. ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಗೃಹ ಮಂಡಳಿ ಅಧ್ಯಕ್ಷರಾಗಿ ಈ ಹಿಂದೆ ಬಹಳ ಅನುಭವಿಗಳು ಕೆಲಸ ಮಾಡಿದ್ದಾರೆ. ನನಗೆ ಈ ಹುದ್ದೆ ಕೊಟ್ಟಿರುವುದು ಸಂತೋಷದ ವಿಚಾರ. ಹೊಸಕೋಟೆಯ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಮುಂದಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿರುವುದರಿಂದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ನನಗೆ ಸಾಧ್ಯವಿಲ್ಲ. ಆದ್ದರಿಂದ ಆ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.

ಅಂತೆಯೇ ತಾವು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ ಎಂದು ಹೇಳಿದ ಶರತ್ ಬಚ್ಚೇಗೌಡ,  'ನಾನು ಯಾವುದೇ ಸ್ವಾಭಿಮಾನಿ ದಳ ರಚನೆ ಮಾಡಿಲ್ಲ. ತಾಲ್ಲೂಕಿನಾದ್ಯಂತ ಬಿಜೆಪಿ ಕಾರ್ಯಕರ್ತರ ಸಭೆಗಳನ್ನು ಮಾಡಿ ಅವರ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇನೆ. ಉಪ ಚುನಾವಣೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಕಾಯುತ್ತಿದ್ದೇನೆ. ತಾಲ್ಲೂಕಿನ ಜನರು ನನ್ನ ಸ್ಪರ್ಧೆಗೆ ಒಲವು ತೋರಿಸಿದ್ದಾರೆ. ಸ್ಪರ್ಧೆ ಕುರಿತು ವರಿಷ್ಠರು ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್ ಕುರಿತು ಮಾತನಾಡಿದ ಅವರು, ಎಂಟಿಬಿ ನಾಗರಾಜ್ ಇನ್ನೂ ಯಾವುದೇ ಪಕ್ಷಕ್ಕೆ ಸೇರಿಲ್ಲ. ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ ಅವರಿಗೆ ಬಿಜೆಪಿ ಟಿಕೆಟ್ ಕೊಡುವ ಕುರಿತು ನಿರ್ಧಾರ ಆಗಲಿದೆ. ಆನಂತರ ನನ್ನ ತೀರ್ಮಾನ  ಪ್ರಕಟಿಸುತ್ತೇನೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com