ಕಲಾಪ ವರದಿಗೆ ಮಾಧ್ಯಮಗಳಿಗೆ ನಿರ್ಬಂಧ: ಕಾಂಗ್ರೆಸ್ ನಾಯಕರ ಆಕ್ರೋಶ

ವಿಧಾನಮಂಡಲ ಅಧಿವೇಶನ ಕಲಾಪ ವರದಿ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಕಾಂಗ್ರೆಸ್ ನಾಯಕರು ಕಟುವಾಗಿ ಟೀಕಿಸಿದ್ದು, ಬಿಜೆಪಿಯ ಧೋರಣೆ ಪ್ರಜಾಪ್ರಭುತ್ವ ವಿರೋಧಿ ಎಂದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಕಲಾಪ ವರದಿ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಕಾಂಗ್ರೆಸ್ ನಾಯಕರು ಕಟುವಾಗಿ ಟೀಕಿಸಿದ್ದು, ಬಿಜೆಪಿಯ ಧೋರಣೆ ಪ್ರಜಾಪ್ರಭುತ್ವ ವಿರೋಧಿ ಎಂದಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, 2008ರಲ್ಲಿ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಅಧಿವೇಶನ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಅವು ಮತ್ತೆ ಮರುಕಳಿಸಬಹುದು ಎಂಬ ಕಾರಣಕ್ಕೆ ಮಾಧ್ಯಮಗಳನ್ನು ಹೊರಗಿಡಲು ಮುಂದಾಗಿರಬಹುದು. ಗುರುವಾರ ಇದಕ್ಕೆ ಅವರು ಸದನದಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದರು.

ತಮ್ಮ ಸರ್ಕಾರದ ಅವಧಿಯಲ್ಲಿ ಈ ಬಗ್ಗೆ ಪ್ರಸ್ತಾವನೆ ಬಂದಿರಬಹುದಾದರೂ ಕಾಂಗ್ರೆಸ್ ಮಾಧ್ಯಮಗಳಿಗೆ ನಿರ್ಬಂಧ ಹೇರಿರಲಿಲ್ಲ. ಒಂದು ವೇಳೆ ಬಿಜೆಪಿಯ ಈಗಿನ ಸರ್ಕಾರ ಕಾಂಗ್ರೆಸ್ ಮಾಡಿದ್ದ ಎಲ್ಲಾ ಕೆಲಸಗಳನ್ನು ಮಾಡುತ್ತದೆ ಎನ್ನುವುದೇ ಆದಲ್ಲಿ, ತಮ್ಮ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಲಿ ಎಂದು ಪರಮೇಶ್ವರ್ ಸವಾಲು ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com