ವಿಧಾನಸಭೆ ಅಧಿವೇಶನ: ವಿಪಕ್ಷಗಳ ದಾಳಿ ಎದುರಿಸಲು ಬಿಜೆಪಿ ಸಿದ್ಧ

ವಿಧಾನಸಭೆ ಚಳಿಗಾಲ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಪ್ರವಾಹ ಪರಿಹಾರ ಕಾರ್ಯಗಳ ಕುರಿತಂತೆ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ರೂಪಿಸಿದ್ದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸಭೆ ಚಳಿಗಾಲ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಪ್ರವಾಹ ಪರಿಹಾರ ಕಾರ್ಯಗಳ ಕುರಿತಂತೆ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ರೂಪಿಸಿದ್ದು, ವಿಪಕ್ಷದಳ ದಾಳಿ ಎದುರಿಸಲು ಬಿಜೆಪಿ ಸಜ್ಜಾಗಿದ್ದು, ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಪಕ್ಷದ ಶಾಸಕರು ಮುಂದಾಕಬೇಕೆಂಬ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. 

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಬಿಜೆಪಿ ಶಾಸಕಾಂಗ ಸಭೆ ನಡೆದಿದ್ದು, ಸಭೆಯಲ್ಲಿ ಪ್ರತಿಪಕ್ಷಗಳ ತಂತ್ರಕ್ಕೆ ಆಡಳಿತ ಪಕ್ಷ ಬಿಜೆಪಿ ಪ್ರತಿತಂತ್ರ ರೂಪಿಸಿದ್ದು, ವಾಗ್ದಾಳಿಗಳನ್ನು ಸಮರ್ಥವಾಗಿ ಎದುರಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಇದಕ್ಕೂ ಮೊದಲು ನಡೆದ ಸಚಿವರ ಸಭೆಯಲ್ಲೂ ಇದೇ ರೀತಿಯ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ನೆರೆ ಹಾವಳಿ ಕುರಿತು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಲಿದೆ. ಅಲ್ಲದೇ, ವಿಧಾನಸಭಾ ಕಲಾಪ ಚಿತ್ರೀಕರಣಕ್ಕಾಗಿ ಮಾಧ್ಯಮಗಳ ಮೇಲೆ ಹೇರಲಾಗಿರುವ ನಿರ್ಬಂಧವನ್ನೂ ಮತ್ತೊಂದು ಅಸ್ತ್ರವಾಗಿಸಲು ಮುಂದಾಗಿದೆ. ಸಹಜವಾಗಿ ಈ ವಿಚಾರಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹರಿಹಾಯಲಿದೆ. ಇದಕ್ಕೆಲ್ಲಾ ಪಕ್ಷದ ಶಾಸಕರು ಮತ್ತು ಸಚಿವರು ಸಮರ್ಥವಾಗಿ ಉತ್ತರ ನೀಡುವ ಮೂಲಕ ತಿರುಗೇಟು ನೀಡಬೇಕೆಂಬ ನಿರ್ದೇಶವನ್ನು ನೀಡಲಾಗಿದೆ. 

ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ನಡೆಸಿದ ಕಾರ್ಯವೈಖರಿಯ ಕುರಿತು ಪ್ರಸ್ತಾಪಿಸಿ ಪ್ರತಿಪಕ್ಷಗಳನ್ನು ಕಟ್ಟಿಹಾಕುವ ಪ್ರಯತ್ನ ನಡೆಸಬೇಕು. ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸವಂತಹ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಪ್ರತಿಪಕ್ಷಗಳ ಇಂತಹ ಬೆದರಿಕೆಗಳಿಗೆ ಬಗ್ಗದೆ ದೃಢ ಮತ್ತು ವಿಶ್ವಾಸದಿಂದ ಪ್ರತಿಕ್ರಿಯೆಗಳನ್ನು ನೀಡಬೇಕು. ವರ್ಗಾವಣೆ ವಿಚಾರ, ಪ್ರವಾಹ ಪರಿಹಾರ ಸೇರಿದಂತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೈಗೊಂಡಿರುವ ತೀರ್ಮಾನಗಳ ಕುರಿತು ಸಮರ್ಥವಾಗಿ ಸದನದಲ್ಲಿ ಮಂಡಿಸಬೇಕು. ಸದನಗಲ್ಲಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವ ಮುನ್ನ ಮಾಹಿತಿ ಪಡೆದು ಮಾತನಾಡಬೇಕು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com