ಪ್ರತಿಕ್ರಿಯೆ ನೀಡದಿದ್ದರೆ ಯತ್ನಾಳ್ ವಿರುದ್ಧ ಶಿಸ್ತುಕ್ರಮ: ಕಟೀಲ್ ಎಚ್ಚರಿಕೆ 

ಪಕ್ಷದ ಶಿಸ್ತು ಸಮಿತಿ ನೀಡಿದ ಶೋಕಾಸ್ ನೋಟೀಸ್ ಗೆ ಉತ್ತರಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಕರ್ತವ್ಯ, ಒಂದು ವೇಳೆ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡದಿದ್ದರೇ ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಮಂಗಳೂರು: ಪಕ್ಷದ ಶಿಸ್ತು ಸಮಿತಿ ನೀಡಿದ ಶೋಕಾಸ್ ನೋಟೀಸ್ ಗೆ ಉತ್ತರಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಕರ್ತವ್ಯ, ಒಂದು ವೇಳೆ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡದಿದ್ದರೇ ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಯತ್ನಾಳ್ ಅವರಿಗೆ ನೋಟೀಸ್ ನೀಡಲಾಗಿದೆ, ಬಿಜೆಪಿ ರಾಷ್ಟ್ರೀಯ ನಾಯಕರು ಎಲ್ಲಾ ವಿದ್ಯಮಾನಗಳನ್ನು ಗಮನಿಸುತ್ತಿದ್ದಾರೆ, ಸದ್ಯ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ.ಯತ್ನಾಳ್ ನೋಟೀಸ್ ಗೆ ಪ್ರತಿಕ್ರಿಯೆ ನೀಡದಿದ್ದರೇ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ, ನೊಟೀಸ್ ಉತ್ತರಿಸದಿರುವುದು ಅಹಂಕಾರವಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಪ್ರವಾಹ ಪರಿಸ್ಥಿತಿ ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಳೆದ ವಾರ ಬಸನರಾಜ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದರು.  ಯತ್ನಾಳ್ ಅವರ ಈ ಹೇಳಿಕೆಗಾಗಿ ಪಕ್ಷದ ಶಿಸ್ತು ಸಮಿತಿ ಪಕ್ಷದ ನಿಯಮದಂತೆ ನೊಟೀಸ್ ಜಾರಿ ಮಾಡಿ ಉತ್ತರಿಸುವಂತೆ ಸೂಚಿಸಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com