ಅಧಿವೇಶನವನ್ನು ಡಿಡಿ ಚಂದನ ವಾಹಿನಿ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ: ಸಿದ್ದರಾಮಯ್ಯ

ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಧ್ವನಿ ತಗ್ಗಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿದ್ದು, ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ್‍ಗಳ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಿರುದ್ಧ ಗುಡಿಗಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು ಸರ್ಕಾರಿ ಕೃಪಾಪೋಷಿತ ಡಿಡಿ ಚಂದನ ನ್ಯೂಸ್ ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ ಎಂದು ಡಿಡಿ ಚಂದನ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com