ಅಧಿಕಾರಕ್ಕೆ ಕಿತ್ತಾಟ: ಕರ್ನಾಟಕ ಬಿಜೆಪಿಯೊಳಗೆ ಭಿನ್ನಮತ ಗೊಣಗಾಟ ತೀವ್ರ

ಬೆಳಗಾವಿಯ ಸುವರ್ಣ ಸೌಧದಲ್ಲಿ ಮೂರು ದಿನಗಳ ಕಾಲ ನಡೆದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಯಾವುದೇ ಸ್ವಾತಂತ್ರ್ಯವಿರಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ ಕುಟುಂಬಸ್ಥರು(ಸಂಗ್ರಹ ಚಿತ್ರ)
ಬಿಎಸ್ ಯಡಿಯೂರಪ್ಪ ಕುಟುಂಬಸ್ಥರು(ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಯಾವುದೇ ಸ್ವಾತಂತ್ರ್ಯವಿರಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರ ರೆಕ್ಕೆಯನ್ನು ಕತ್ತರಿಸಿ ಹಾಕಿದೆ.ಮುಖ್ಯಮಂತ್ರಿಯಾಗಿ ಸ್ವತಂತ್ರವಾಗಿ ಕೆಲಸ ಮಾಡಲು ಅವರಿಗೆ ಸ್ವಾತಂತ್ರ್ಯವಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯದ ಪ್ರವಾಹಕ್ಕೆ ಸರಿಯಾದ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.


ಕೇಂದ್ರ ಮತ್ತು ರಾಜ್ಯದ ನಾಯಕತ್ವ ಯಡಿಯೂರಪ್ಪನವರನ್ನು ಕಟ್ಟಿಹಾಕಲು ಯತ್ನಿಸುತ್ತಿವೆ ಎಂದು ಬಾಹ್ಯವಾಗಿ ಕಂಡರೂ ಮುಖ್ಯಮಂತ್ರಿಗಳ ಆಪ್ತಮೂಲಗಳು ಹೇಳುವ ಪ್ರಕಾರ, ಮುಖ್ಯಮಂತ್ರಿಗಳ ಪರಿಸ್ಥಿತಿಗೆ ಅವರ ವರ್ತನೆಯೇ ಕಾರಣ ಎಂದು ಹೇಳಲಾಗುತ್ತಿದೆ.


ಯಡಿಯೂರಪ್ಪನವರ ವಿರೋಧವಿದ್ದರೂ ಕೂಡ ಕೇಂದ್ರ ನಾಯಕತ್ವ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದೆ. ಅಧಿಕಾರವನ್ನು ಸಮಾನವಾಗಿ ಹಂಚಿಕೆ ಮಾಡಲು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಅಂಕುಶ ಹಾಕಲಾಗಿದೆ. ಇದಕ್ಕೆ ತೀವ್ರ ನೊಂದಿರುವ ಬಿಎಸ್ ವೈ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರನ್ನು ತಮ್ಮ ಆಡಳಿತದಲ್ಲಿ ಮುಂಚೂಣಿಯಲ್ಲಿರುವಂತೆ ನೋಡಿಕೊಂಡಿದ್ದಾರೆ. ವಿಜಯೇಂದ್ರ ಅವರಿಗೆ ಯಾವುದೇ ಅಧಿಕೃತ ಹುದ್ದೆ ಅಥವಾ ಸ್ಥಾನವಿಲ್ಲದಿದ್ದರೂ ಸಿಎಂ ಅಧಿಕೃತ ಸಭೆಗಳಲ್ಲಿ ವಿಜಯೇಂದ್ರ ಭಾಗವಹಿಸುತ್ತಿದ್ದು ಇದು ಹೈಕಮಾಂಡ್ ಮುನಿಸಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.


ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪನವರ ಆಪ್ತ ಶಾಸಕರನ್ನು ಉದ್ದೇಶಪೂರ್ವಕವಾಗಿಯೇ ಹೊರಗಿಡಲಾಯಿತು. ಕೊನೆಗೆ ಶಾಸಕರಾದ ಎಸ್ ಆರ್ ವಿಶ್ವನಾಥ್, ಎಂ ಪಿ ರೇಣುಕಾಚಾರ್ಯರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳನ್ನಾಗಿ ಯಡಿಯೂರಪ್ಪ ನೇಮಿಸಿಕೊಂಡರು. ಇದು ಕೂಡ ಹೈಕಮಾಂಡ್ ಕಣ್ಣು ಕೆಂಪಗಾಗಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com