ಯತ್ನಾಳ್ ವಿರುದ್ದ ತಿರುಗಿಬಿದ್ದ ಬಿಜೆಪಿ ಜಿಲ್ಲಾ ಸಮಿತಿ: ಪಕ್ಷದಿಂದ ಹೊರಹಾಕುವಂತೆ ಒತ್ತಾಯ? 

ಪ್ರವಾಹ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರ ವಿರುದ್ಧ ಹರಿಹಾಯ್ದಿದ್ದ ಮಾಜಿ ಕೇಂದ್ರ ಸಚಿವ  ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ತಿರುಗಿಬಿದ್ದಿದ್ದು, ಪಕ್ಷದಿಂದ ಹೊರಹಾಕುವಂತೆ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಪ್ರವಾಹ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರ ವಿರುದ್ಧ ಹರಿಹಾಯ್ದಿದ್ದ ಮಾಜಿ ಕೇಂದ್ರ ಸಚಿವ  ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ತಿರುಗಿಬಿದ್ದಿದ್ದು, ಪಕ್ಷದಿಂದ ಹೊರಹಾಕುವಂತೆ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಪ್ರವಾಹ ಪರಿಹಾರ ವಿಳಂಬ ಕುರಿತಂತೆ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದ ಯತ್ನಾಳ್ ಅವರಿಗೆ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿಯಾಗಿತ್ತು. ಇದೀಗ ಪಕ್ಷದ ಜಿಲ್ಲಾ ನಾಯಕರೇ ಪಕ್ಷದ ನಾಯಕ ಸ್ಥಾನದಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೊರಹಾಕುವಂತೆ ಒತ್ತಾಯಿಸಿದೆ ಎಂದು ತಿಳಿದುಬಂದಿದೆ. 

ಕೇಂದ್ರ ಶೋಕಾಸ್ ನೀಡಿದೆ ಎಂದಷ್ಟೇ ಅಲ್ಲ, ಯತ್ನಾಳ್ ಅವರು ಪಕ್ಷದ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳುತ್ತಿಲ್ಲ. ಇದಲ್ಲದೆ, ಕೆಲ ಸ್ಥಳೀಯ ನಾಯಕರನ್ನು ಗುರಿಯಾಗಿಸಿಕೊಂಡು ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿಜಯಪುರ ನಗರ ನಿಗಮ ಮೇಯರ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಹಕ್ಕು ಚಲಾಯಿಸಿದಾಗಲೇ ಇದು ಸ್ಪಷ್ಟವಾಗಿತ್ತು. ಈ ಸಂಬಂದ ಕೇಂದ್ರೀಯ ನಾಯಕತ್ವದ ಬಳಿ ವರದಿಯನ್ನು ಸಲ್ಲಿಸಲಾಗಿದ್ದು, ಪಕ್ಷದಿಂದ ಹೊರಹಾಕುವಂತೆ ಒತ್ತಾಯಿಸಲಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com