ಬಿಜೆಪಿ ಬಂಡಾಯ ನಾಯಕರು ಕಾಂಗ್ರೆಸ್ ಸೇರುವುದು ಖಚಿತ: ಸತೀಶ್ ಜಾರಕಿಹೊಳಿ ವಿಶ್ವಾಸ

ಉಪ ಚುನಾವಣೆ ಟಿಕೆಟ್ ಕುರಿತಂತೆ ಬಿಜೆಪಿ ಪಕ್ಷದಲ್ಲಿ ಬಂಡಾಯದ ಹೊಗೆಯಾಡುತ್ತಿದ್ದು, ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಉಪ ಚುನಾವಣೆ ಟಿಕೆಟ್ ಕುರಿತಂತೆ ಬಿಜೆಪಿ ಪಕ್ಷದಲ್ಲಿ ಬಂಡಾಯದ ಹೊಗೆಯಾಡುತ್ತಿದ್ದು, ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಉಪ ಚುನಾವಣೆಯಲ್ಲಿ ಟಿಕೆಟ್ ದೊರೆಯದೇ ಹೋದರಲ್ಲಿ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ಖಚಿತ. ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆಂದು ಹೇಳಿದ್ದಾರೆ. 

ಬಿಜೆಪಿ ಟಿಕೆಟ್ ನೀಡಲಿ, ನೀಡದೇ ಹೋಗಲಿ ಈ ಬಾರಿಯ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಎಂದು ಈಗಾಗಲೇ ಬಿಜೆಪಿ ಶಾಸಕ ಕಾಗ್ವಾಡ್ ರಾಜು ಕಾಗೆಯವರು ಹೇಳಿದ್ದಾರೆ. ಇದಲ್ಲದೆ ರಾಜು ಕಾಗೆಯವರು ಸಿಎಡಿಎ ಅಧ್ಯಕ್ಷ ಸ್ಥಾನವನ್ನೂ ನಿರಾಕರಿಸಿದ್ದಾರೆ. 

ಈ ನಡುವೆ ಕಾಗ್ವಾಡ್ ನಿಂದ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅಥವಾ ಅವರ ಪುತ್ರ ಸ್ಪರ್ಧಿಸುವುದು ಖಚಿತ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಇದೇ ರೀತಿ ಗೋಕಾಕ್ ನಲ್ಲಿಯೂ ಪರಿಸ್ಥಿತಿ ಮುಂದುವರೆದಿದೆ. ಬಿಜೆಪಿ ನಾಯಕ ಅಶೋಕ್ ಪೂಜಾರಿಯವರು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ. ಅಧ್ಯಕ್ಷ ಸ್ಥಾನಗಳಿಗಿಂತಲೂ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ ಎಂದು ಅಶೋಕ್ ಅವರು ಹೇಳಿದ್ದಾರೆ. 

ಬಿಜೆಪಿಯಲ್ಲಿ ಇಷ್ಟೆಲ್ಲಾ ಬಂಡಾಯದ ಹೊಗೆಯಾಡುತ್ತಿದ್ದರೂ, ಯಾವುದೇ ನಾಯಕರೂ ಪಕ್ಷ ತೊರೆಯುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿಲ್ಲ. ಆದರೆ, ಸತೀಶ್ ಜಾರಕಿಹೊಳಿ ಮಾತ್ರ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ನಾಯಕರು ಒಡೆದಿದ್ದಾರೆಂಬುದನ್ನು ಗೋಕಾಕ್ ಉಪ ಚುನಾವಣೆ ಬಹಿರಂಗಪಡಿಸಲಿದೆ. ರಮೇಶ್ ಜಾರಕಿಹೊಳಿಯನ್ನು ಸೋಲಿಸಲು ನಾನು ಹಾಗೂ ಲಾಖನ್ ಜೊತೆಗೂಡಿ ಪ್ರಚಾರ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com