ಉಪಚುನಾವಣಾ ಸಮರಕ್ಕೆ ಕಾಂಗ್ರೆಸ್, ಬಿಜೆಪಿ ಭರದ ಸಿದ್ಧತೆ: 'ಸುಪ್ರೀಂ' ತೀರ್ಪಿಗಾಗಿ ಕಾಯುತ್ತಿರುವ ಜೆಡಿಎಸ್

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಸಮರಕ್ಕೆ ಒಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಭರದ ಸಿದ್ಥತೆಗಳನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ ಯಾವುದೇ ಸಿದ್ಧತೆಗಳನ್ನೂ ನಡೆಸದೆಯೇ ಜೆಡಿಎಸ್ ಮಾತ್ರ ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾದು ಕುಳಿತಿದೆ. 
ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ
ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಸಮರಕ್ಕೆ ಒಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಭರದ ಸಿದ್ಥತೆಗಳನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ ಯಾವುದೇ ಸಿದ್ಧತೆಗಳನ್ನೂ ನಡೆಸದೆಯೇ ಜೆಡಿಎಸ್ ಮಾತ್ರ ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾದು ಕುಳಿತಿದೆ. 

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದು, ಪ್ರಚಾರ ಕಾರ್ಯಗಳ ಕುರಿತು ಯೋಜನೆ ರೂಪಿಸುತ್ತಿವೆ. ಆದರೆ, ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೇ ಉಪ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತದೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. 

ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರ ಅರ್ಜಿ ಇನ್ನೂ ಸುಪ್ರೀಂಕೋರ್ಟ್ ಅಂಗಳದಲ್ಲಿಯೇ ಇದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೇ ಯಾವುದೇ ಸಿದ್ಧತೆಗಳನ್ನು ನಡೆಸಲು ಸಾಧ್ಯ ಎಂದು ತಿಳಿಸಿದ್ದಾರೆ. 

ಅ.22 ರಂದು ಅನರ್ಹ ಶಾಸಕರ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ತೀರ್ಪು ಏನು ಬರುತ್ತದೆ ಎಂದು ಕಾದು ನೋಡೋಣ. ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದೇ ಆದರೆ, ಉಪ ಚುನಾವಣೆ ಅತ್ಯಗತ್ಯ. ನ್ಯಾಯಾಲಯ ಸ್ಪೀಕರ್ ವಿರುದ್ಧ ತೀರ್ಪು ನೀಡಿದರೆ ಚುನಾವಣೆಯ ಅಗತ್ಯವೇ ಇರುವುದಿಲ್ಲ. ಚುನಾವಣೆ ನಡೆದಿದ್ದೇ ಆದರೆ, ಜೆಡಿಎಸ್, ಕಾಂಗ್ರೆಸ್ ಜೊತೆಗೆ ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com